ಬೆಂಗಳೂರು: ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿ ಹಾಗೂ ಕೀನ್ಯಾ ಕನ್ನಡ ಸಂಸ್ಕೃತಿ ಸಮಿತಿಯ ಸಹಯೋಗದಲ್ಲಿ 10ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ವನ್ನು ಮಾರ್ಚ್ 1 ಮತ್ತು 2ರಂದು ನೈರೋಬಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಸಮಿತಿಯ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್ ಅವರು, ನೈರೋಬಿಯ ಓಸ್ವಾಲ್ ಸೆಂಟರ್ ಸಭಾಂಗಣದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಕವಿಗೋಷ್ಠಿ, ಹಾಸ್ಯಗೋಷ್ಠಿ, ಕನ್ನಡ ಹಾಗೂ ಕನ್ನಡಿಗರ ಸಂಸ್ಕೃತಿಯನ್ನು ಬಿಂಬಿಸುವ ಜಾನಪದ, ಯಕ್ಷಗಾನ, ಭರತನಾಟ್ಯ ಸೇರಿದಂತೆ ಹಲವಾರು ಕಾರ್ಯಕ್ರಮ ಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ಸಮ್ಮೇಳನದಲ್ಲಿ ಕರ್ನಾಟಕ ದರ್ಶನ ಕಾರ್ಯಕ್ರಮವನ್ನು ಆಯೋಜಿಸ ಲಾ ಗಿದ್ದು, ಅದಕ್ಕಾಗಿ ರಾಜ್ಯದಿಂದ 100 ಮಂದಿ ಕಲಾವಿದರ ತಂಡವನ್ನು ನೈರೋಬಿಗೆ ತೆರಳಲಿದೆ.

ಈಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಆರ್.ವಿ. ದೇಶಪಾಂಡೆ ಹಾಗೂ ಉಮಾಶ್ರೀ ಅವರನ್ನೂ ಆಹ್ವಾನಿಸಲಾಗುವುದು. ಜತೆಗೆ ಕೀನ್ಯಾ ಮತ್ತು ನೈರೋಬಿಯಲ್ಲಿ ಇರುವ 250ಕ್ಕೂ ಹೆಚ್ಚು ಕನ್ನಡದ ಕುಟುಂಬಗಳು ಇದರಲ್ಲಿ ಭಾಗವಹಿಸ ಲಿದ್ದಾರೆ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.