ಮಹದೇವಪುರ: `ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಈ ತಿಂಗಳ 10ರಿಂದ ಒಂದು ರೂಪಾಯಿಗೆ ಒಂದು ಕೆ.ಜಿ. ಅಕ್ಕಿಯನ್ನು ವಿತರಿಸಲು ಆದೇಶ ನೀಡಲಾಗಿದೆ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ದೊಡ್ಡನೆಕ್ಕುಂದಿ ಗ್ರಾಮದಲ್ಲಿ ಭಾನುವಾರ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. `ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಘೋಷಣೆ ಮಾಡಿದ ಮೊದಲ ಯೋಜನೆ ಇದಾಗಿದೆ. ರಾಜ್ಯದಲ್ಲಿನ ಎಲ್ಲಾ ಬಡವರ ಹಸಿವನ್ನು ನೀಗಿಸುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ' ಎಂದು ಅವರು ಹೇಳಿದರು.

`ಅಲ್ಲದೆ ರಾಜ್ಯದಲ್ಲಿನ ಎಲ್ಲ ವರ್ಗದವರಿಗೂ ಪಡಿತರ ಚೀಟಿಯನ್ನು ನೀಡುವ ಉದ್ದೇಶದಿಂದ ಇಂಟರ್ನೆಟ್ ಮೂಲಕ ನೋಂದಣಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಒಟ್ಟು 12 ಲಕ್ಷ ಜನರು ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ' ಎಂದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, `ಕಳೆದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಭೂತವನ್ನು ಬಿಟ್ಟು ಹೋಗಿದೆ. ಅದನ್ನು ಹೊಡೆದು ತೊಲಗಿಸಲು ಕಾಂಗ್ರೆಸ್ ಸಾಕಷ್ಟು ಶ್ರಮವಹಿಸಬೇಕಿದೆ' ಎಂದರು.

`ರಾಜ್ಯದ ಅಭಿವೃದ್ಧಿ ನೆಪದಲ್ಲಿ ಜನತೆಯ ಹಣವನ್ನು ಕಬಳಿಸಿರುವ ಬಿಜೆಪಿ ಪಕ್ಷದ ನಾಯಕರು ಹೀನಾಯ ಸೋಲು ಕಂಡಿದ್ದಾರೆ. ಅಲ್ಲದೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಲು ಕೂಡಾ ಅವಕಾಶ ಇಲ್ಲದಂತಹ ಸ್ಥಿತಿಯಲ್ಲಿ ಬಿಜೆಪಿ ಪಕ್ಷ ಇದೆ' ಎಂದು ಹೇಳಿದರು.

ದೊಡ್ಡನೆಕ್ಕುಂದಿ ನಗರಸಭೆಯ ಮಾಜಿ ಸದಸ್ಯ, ಬಿಜೆಪಿಯ ಭಾಸ್ಕರ್ ರೆಡ್ಡಿ ಅವರನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಯಿತು. ಶಾಸಕ ಬಿ.ಶಿವಣ್ಣ, ಕಾಂಗ್ರೆಸ್ ಮುಖಂಡರಾದ ಎಚ್.ಕೆ.ನಾರಾಯಣಸ್ವಾಮಿ, ಎಂ.ವೇಣುಗೋಪಾಲ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.