ಹಿರೀಸಾವೆ: `ನಮ್ಮ ಗ್ರಾಮ-ನಮ್ಮ ರಸ್ತೆ~ ಯೋಜನೆಯಡಿ ತಾಲ್ಲೂಕಿನ 10 ಗ್ರಾಮಗಳಲ್ಲಿ ರೂ. 5.5 ಕೋಟಿ ವೆಚ್ಚದಲ್ಲಿ 20 ಕಿ.ಮೀ. ರಸ್ತೆ ಅಭಿವೃದ್ಧಿ ಮಾಡಲಾಗುವುದು ಶಾಸಕ ಸಿ.ಎಸ್. ಪುಟ್ಟೇಗೌಡ ಹೇಳಿದರು.

ಹೋಬಳಿಯ ಬೂಕ ಗ್ರಾಮದಲ್ಲಿ ಶುಕ್ರವಾರ `ನಮ್ಮ ಗ್ರಾಮ-ನಮ್ಮ ರಸ್ತೆ~ ಯೋಜನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣಕ್ಕೆ ರಸಗೊಬ್ಬರ ಮಾರುವವರ ವಿರುದ್ಧ ಕ್ರಮ ಕೈಗೊಳ್ಳಲು ಕೃಷಿ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.

ತಾಲ್ಲೂಕಿನ ರಸಗೊಬ್ಬರ ಮಾರಾಟಗಾರರು ಮತ್ತು ಸಹಕಾರ ಸಂಘಗಳ ಅಧ್ಯಕ್ಷರ ಸಭೆ ಕರೆದು ರಸಗೊಬ್ಬರ ವಿತರಣೆ ಬಗ್ಗೆ ಮಾಹಿತಿ ನೀಡಲಾಗುವುದು, ಕಾಳ ಸಂತೆಯಲ್ಲಿ ಗೊಬ್ಬರ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿ.ಪಂ. ಮಾಜಿ ಸದಸ್ಯ ಎಂ.ಕೆ.ಮಂಜೇಗೌಡ ಹಾಸನ ಜಿಲ್ಲಾ ಸಹಕಾರ ಬ್ಯಾಂಕ್ನ ಅಧ್ಯಕ್ಷ ಸಿ.ಎನ್.ಬಾಲಕೃಷ್ಣ, ಜಿ.ಪಂ. ಸದಸ್ಯರಾದ ಎನ್.ಡಿ.ಕಿಶೋರ್, ಡಿ.ಜಿ.ಅಂಬಿಕಾರಾಮಕೃಷ್ಣ, ಕುಸುಮರಾಣಿ, ತಾ.ಪಂ. ಸದಸ್ಯ ಹೆಚ್.ಎಸ್.ರವಿಕುಮಾರ್, ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಬಿ.ಉದಯಕುಮಾರ, ಗ್ರಾ.ಪಂ. ಅಧ್ಯಕ್ಷ ಮಂಜುನಾಥ, ಜೆಡಿಎಸ್ ಮುಖಂಡರಾದ ಶ್ರೀಕಂಠಪ್ಪ, ಹೋಬಳಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಸಿ.ಬೋಮ್ಮೇಗೌಡ ಮಾಜಿ ತಾ.ಪಂ. ಸದಸ್ಯ ರಾಮಕೃಷ್ಣಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.