ಸೋಮವಾರ, ಜೂನ್ 14, 2021
26 °C

10 ಬ್ಯಾರೇಜ್ ನಿರ್ಮಾಣಕ್ಕೆ ರೂ 100 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿ ಈ ಸೂಚನೆ ನೀಡಿದರು.ಜಿಲ್ಲೆಯಲ್ಲಿನ ಕುಡಿಯುವ ನೀರಿನ ಪರಿಸ್ಥಿತಿ ವಿವರ ನೀಡಿದ ಜಿ.ಪಂ. ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಹನುಮಂತಪ್ಪ ಅವರು, ಜಿಲ್ಲೆಯಲ್ಲಿ ಬರದ ಹಿನ್ನೆಲೆಯಲ್ಲಿ 434 ಕಾಮಗಾರಿ ಕೈಗೊಳ್ಳಲಾಗಿದೆ. 266 ಪೂರ್ಣವಾಗಿದೆ. ಇನ್ನೂ 134 ಪ್ರಗತಿಯಲ್ಲಿವೆ. ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗುವುದು. ಏಪ್ರಿಲ್ 15ರ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.ಕುಡಿಯುವ ನೀರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವೇದಾವತಿ ನದಿಗೆ ಸುಮಾರು 10 ಸ್ಥಳಗಳಲ್ಲಿ ಬ್ಯಾರೇಜ್ ನಿರ್ಮಿಸಲು ್ಙ 100 ಕೋಟಿ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.ಜಿ.ಪಂ. ಅಧ್ಯಕ್ಷ ಟಿ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಶೇ. 90ರಷ್ಟು ಕುಡಿಯುವ ನೀರಿನ ಅಭಾವವಿದೆ. ಚಳ್ಳಕೆರೆ, ಮೊಳಕಾಲ್ಮುರು ಸೇರಿದಂತೆ ಹಲವು ಸ್ಥಳಗಳಲ್ಲಿ ಭೀಕರ ಪರಿಸ್ಥಿತಿ ಇದೆ. ಯುಗಾದಿ ಹಬ್ಬ ಸಮೀಪಿಸುತ್ತಿರುವುದರಿಂದ ತುರ್ತಾಗಿ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಕೆಲವೆಡೆ ಕೊಳವೆಬಾವಿಗಳನ್ನು ಕೊರೆಯಿಸಿದ್ದರೂ ಪಂಪ್‌ಸೆಟ್ ಅಳವಡಿಸುವುದು ವಿಳಂಬವಾಗುತ್ತಿದೆ. ಇನ್ನು 15 ದಿನಗಳಲ್ಲಿ ಮಳೆಯಾಗದಿದ್ದರೆ ಟ್ಯಾಂಕರ್ ಪೂರೈಸುವುದು ಅನಿವಾರ್ಯವಾಗುತ್ತದೆ ಎಂದು ನುಡಿದರು.

ಗುತ್ತಿಗೆದಾರರ `ಪೈಪ್‌ಲೈನ್~ ವ್ಯವಹಾರ!ಪೈಪ್‌ಲೈನ್ ವ್ಯವಹಾರ ನಡೆಸುವ ಉದ್ದೇಶದಿಂದ ಕೆಲವೆಡೆ ಕೃತಕ ನೀರಿನ ಅಭಾವವನ್ನು ಗುತ್ತಿಗೆದಾರರು ಸೃಷ್ಟಿಸುತ್ತಿದ್ದಾರೆ ಶಾಸಕ ಎಸ್.ಕೆ. ಬಸವರಾಜನ್ ಆರೋಪಿಸಿದರು.ಜಿ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕರು, ಗುತ್ತಿಗೆದಾರರು ನೀರಿಲ್ಲ ಎಂದು ಸೃಷ್ಟಿ ಮಾಡುತ್ತಿದ್ದಾರೆ. ಪೈಪ್‌ಲೈನ್‌ಗೋಸ್ಕರ ನೀರಿನ ಹಾಹಾಕಾರ ಉಂಟಾಗುತ್ತಿದೆ. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ 15 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಕೆಲವೆಡೆ ಕೊಳವೆಬಾವಿ ಕೊರೆಯಿಸಿದರೂ ನೀರು ಬರುತ್ತಿಲ್ಲ. ಪಕ್ಕದ ಗ್ರಾಮಗಳಿಗೆ ಮತ್ತು ತೋಟಗಳಿಗೆ ಹೋಗಿ ನೀರು ತರಬೇಕಾಗಿದೆ ಎಂದು ವಿವರಿಸಿದರು.ಜಿ.ಪಂ. ಸಿಇಒ ಎನ್. ಜಯರಾಂ ಮಾತನಾಡಿ,  ಗುತ್ತಿಗೆದಾರರ ವ್ಯಾಪಾರಕ್ಕಾಗಿ ಪೈಪ್‌ಲೈನ್ ಹಾಕಬೇಡಿ ಎಂದು ಜಿ.ಪಂ. ಕಾರ್ಯಪಾಲಕ ಎಂಜಿನಿಯರ್‌ಗೆ ಸೂಚಿಸಿದರು.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನಾರಾಯಣಸ್ವಾಮಿ, ವಾಸ್ತವ ಸ್ಥಿತಿ ಅರಿತು ನೀರು ಪೂರೈಸಬೇಕು. ್ಙ 10 ಕೋಟಿ ಉಳಿದಿದ್ದರೂ ಹಣ ಖರ್ಚು ಮಾಡಿಲ್ಲ. ಸ್ಥಳ ಸಮೀಕ್ಷೆ ಮಾಡಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.