ಗುರುವಾರ , ಜುಲೈ 29, 2021
24 °C
ಅತ್ಯಾಚಾರ ಪ್ರಕರಣ ವಿಚಾರಣೆ

10 ವಿಶೇಷ ಕೋರ್ಟ್ ಸ್ಥಾಪನೆ ಪ್ರಸ್ತಾವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯರ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳ ವಿಚಾರಣೆಗೆ ಹತ್ತು ವಿಶೇಷ ನ್ಯಾಯಾಲಯಗಳನ್ನು ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಇಲ್ಲಿ ಹೇಳಿದರು.



ಈ ಸಂಬಂಧ ಶೀಘ್ರದಲ್ಲೇ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಎಲ್ಲೆಲ್ಲಿ ನ್ಯಾಯಾಲಯಗಳನ್ನು ಪ್ರಾರಂಭಿಸಬೇಕು ಎಂಬುದನ್ನು 2-3 ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.



ಮಣಿಪಾಲ ಕಸ್ತೂರಬಾ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಗಳು ಹಾಗೂ ಹಾಸ್ಟೆಲ್ ಆವರಣದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತ ಸುತ್ತೋಲೆಯನ್ನು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಸದ್ಯದಲ್ಲೇ ಕಳುಹಿಸಲಾಗುವುದು ಎಂದರು.



ಮಣಿಪಾಲದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಅವರು ವಿಫಲರಾದರೆ ಬೇರೆ ರೀತಿಯಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.