10 ಸಾವಿರ ಮೆಟ್ರಿಕ್ ಟನ್ ತೊಗರಿ ಖರೀದಿಗೆ ನಿರ್ಧಾರ

7

10 ಸಾವಿರ ಮೆಟ್ರಿಕ್ ಟನ್ ತೊಗರಿ ಖರೀದಿಗೆ ನಿರ್ಧಾರ

Published:
Updated:

ಯಾದಗಿರಿ: ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ವತಿಯಿಂದ ಸರ್ಕಾರ ನಿಗದಿಪಡಿಸಿದ ದರಕ್ಕೆ ಅನುಗುಣವಾಗಿ 10 ಸಾವಿರ ಮೆಟ್ರಿಕ್ ಟನ್ ತೊಗರಿ ಖರೀದಿಸಲು ಮಂಡಳಿ ನಿರ್ಧರಿಸಿದೆ ಎಂದು ಅಧ್ಯಕ್ಷ ಡಾ. ವೆಂಕಟೇಶ ಗಡ್ಡಿಮನಿ ತಿಳಿಸಿದ್ದಾರೆ.ಮಂಡಳಿಯಲ್ಲಿ ಲಭ್ಯವಿರುವ ಅನುದಾನದ ಮಿತಿಯಲ್ಲಿ ತೊಗರಿ ಖರೀದಿಸಲು ನಿರ್ಧರಿಸಲಾಗಿದೆ. ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸುವುದರೊಂದಿಗೆ ಈ ಭಾಗದ ಒಟ್ಟು ಉತ್ಪಾದನೆಯ ಪ್ರಮಾಣವನ್ನು ಮನವರಿಕೆ ಮಾಡಿಕೊಡಲಾಗುವುದು. ಹೆಚ್ಚಿನ ಅನುದಾನಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದ್ದಾರೆ.ರೈತರ ಅನುಕೂಲತೆಯ ದೃಷ್ಟಿಯಿಂದ ಗುಲ್ಬರ್ಗ, ಬೀದರ, ಯಾದಗಿರಿ ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ನೋಡಲ್ ಸಂಸ್ಥೆ ಎಂದು ಆಯ್ಕೆ ಮಾಡಲಾದ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಂಡಳಿ ಸಹಯೋಗದಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry