ಶುಕ್ರವಾರ, ಜೂನ್ 18, 2021
28 °C

100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

100ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಯಲ್ಲಾಪುರ (ಉ.ಕ.ಜಿಲ್ಲೆ): ಹಲ್ಲಿ ಬಿದ್ದಿದ್ದ ಕುಡಿಯುವ ನೀರಿನ ಟ್ಯಾಂಕ್‌ನ ನೀರನ್ನು ಕುಡಿದು ಸುಮಾರು 100ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ತಾಲ್ಲೂಕಿನ ಮಾದೇಕೊಪ್ಪದ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದಿದೆ.ಇವರಲ್ಲಿ 51 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಐದಾರು ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ.

ಬಿಸಿಯೂಟದ ಸಮಯದಲ್ಲಿ ಈ ಘಟನೆ ನಡೆದಿದೆ. ನೀರನ್ನು ಕುಡಿದ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳತೊಡಗಿದಾಗ ಕೆಲವರನ್ನು ಕಿರವತ್ತಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಾಗೂ ಇನ್ನು ಕೆಲವರನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ದಿವಾಕರ ಶೆಟ್ಟಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಚ್.ವಿ.ಗೌಡ, ಸಿಪಿಐ ಅರವಿಂದ ಕಲಗುಜ್ಜಿ, ಮದ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನ್ನು ಪಾಂಡ್ರಮೀಶೆ,  ಸಾಮಾಜಿಕ ಕಾರ್ಯಕರ್ತರಾದ ಅಶೋಕ ತಿನೇಕರ, ಧೋಂಡು ಪಾಟೀಲ, ವಿಠ್ಠು ಪಾಂಡ್ರಮೀಶೆ, ರಹಮತ್ ಅಬ್ಬಿಗೇರಿ ಅವರು ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲು ನೆರವಾದರು.ಶಿಕ್ಷಕರ ವಿರುದ್ಧ ಆಕ್ರೋಶ: ವಾಂತಿಯಿಂದ ವಿದ್ಯಾರ್ಥಿಗಳು ಬಳಲುತ್ತಿದ್ದರೂ ಶಿಕ್ಷಕರು ಮಕ್ಕಳನ್ನು ಹೊರಗೆ ಬರಲು ಬಿಡದೆ  ಮಕ್ಕಳಿಗೆ ಏನೂ ಆಗಿಲ್ಲ, ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.ಮಕ್ಕಳು ಹೆಚ್ಚು ಅಸ್ವಸ್ಥರಾಗಲು ಕಾರಣರಾಗಿದ್ದಾರೆ ಎಂದು ಪಾಲಕರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.ತಪ್ಪಿತಸ್ಥ ಶಿಕ್ಷಕರನ್ನು ಅಮಾನತುಗೊಳಿಸಬೇಕು ಎಂದು ಪಾಲಕರಾದ ವಿಠ್ಠು ಪಾಂಡ್ರಮೀಶೆ, ಧೋಂಡು ಪಾಟೀಲ ಮುಂತಾದವರು ಇದೇ ಸಮದರ್ಬದಲ್ಲಿ ಆಗ್ರಹಿಸಿದರು.ಕಟ್ಟುನಿಟ್ಟಿನ ಸೂಚನೆ: ಬಿಸಿಯೂಟದ ಕೊಠಡಿ ಹಾಗೂ ನೀರಿನ ಟ್ಯಾಂಕ್‌ಗಳನ್ನು ಶುಚಿಯಾಗಿ ಇಟ್ಟುಕೊಳ್ಳುವಂತೆ ಎಲ್ಲಾ ಶಾಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದಿವಾಕರ ಶೆಟ್ಟಿ `ಪ್ರಜಾವಾಣಿ~ ಪ್ರತಿನಿಧಿಗೆ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.