ಗುರುವಾರ , ಏಪ್ರಿಲ್ 22, 2021
22 °C

100 ಅಡಿ ತಲುಪಿದ ಕೆಆರ್‌ಎಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀರಂಗಪಟ್ಟಣ: ತಾಲ್ಲೂಕಿನ ಪ್ರಸಿದ್ಧ ಕೃಷ್ಣರಾಜ ಸಾಗರ ಜಲಾಶಯ ಸೋಮವಾರ ಸಂಜೆ ವೇಳೆ 100 ಅಡಿ ದಾಟಿದೆ.ಜಲಾಶಯದಲ್ಲಿ 100.30 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 14,455 ಕ್ಯೂಸೆಕ್ ನೀರು ಹರಿದು ಬರುತ್ತಿದೆ. 341 ಕ್ಯೂಸೆಕ್ ನೀರನ್ನು ಹೊರಕ್ಕೆ ಹರಿಯ ಬಿಡಲಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 123 ಅಡಿ ನೀರು ಸಂಗ್ರಹವಾಗಿತ್ತು. 11,512 ಕ್ಯೂಸೆಕ್ ಒಳ ಹರಿವು ಹಾಗೂ 8502 ಕ್ಯೂಸೆಕ್ ಹೊರ ಹರಿವು ಇತ್ತು. ಜಲಾಶಯ 110 ಅಡಿ ಮುಟ್ಟುವ ವರೆಗೆ ನಾಲೆಗಳಿಗೆ ನೀರು ಹರಿಸುವುದಿಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.