ಗುರುವಾರ , ಮೇ 13, 2021
16 °C

100 ವೈದ್ಯ ಸೀಟು: ಎಂಸಿಐ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೈಸೂರು ಮತ್ತು ಹುಬ್ಬಳ್ಳಿಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವರ್ಷ ಹೆಚ್ಚಳವಾಗಿದ್ದ ತಲಾ 50 ಸೀಟುಗಳಿಗೆ ಈ ವರ್ಷವೂ ಪ್ರವೇಶ ನೀಡಲು ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಒಪ್ಪಿಗೆ ನೀಡಿದೆ.ಈ ಎರಡೂ ಕಾಲೇಜುಗಳಲ್ಲಿ ಇದ್ದ ಸೀಟುಗಳ ಸಂಖ್ಯೆಯನ್ನು ಕಳೆದ ವರ್ಷ 100ರಿಂದ 150ಕ್ಕೆ ಏರಿಸಲು ಅನುಮತಿ ನೀಡಲಾಗಿತ್ತು. ಆದರೆ, ಹೆಚ್ಚುವರಿ ಸೀಟುಗಳಿಗೆ ಸೌಲಭ್ಯಗಳನ್ನು ಕಲ್ಪಿಸಿಲ್ಲ ಎಂಬ ಕಾರಣಕ್ಕೆ ಈ ವರ್ಷ  ಸೀಟುಗಳ ಪ್ರವೇಶಕ್ಕೆ ಅನುಮತಿ ದೊರೆತಿರಲಿಲ್ಲ.ರಾಜ್ಯ ಸರ್ಕಾರ ಕಾಲಮಿತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದು, ಇದಕ್ಕೆ ಸಮ್ಮತಿ ಸೂಚಿಸಿರುವ ಎಂಸಿಐ ಎರಡೂ ಕಾಲೇಜುಗಳಲ್ಲಿ ತಲಾ 150 ಸೀಟುಗಳಿಗೆ ಪ್ರವೇಶ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.