ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

100 ಶುದ್ಧ ನೀರಿನ ಘಟಕ ಸಂಸದ ಸುರೇಶ್‌ ಭರವಸೆ

Last Updated 16 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ:  ಪ್ರತಿಯೊ­ಬ್ಬರಿಗೂ ಪರಿಶುದ್ದ ನೀರನ್ನು ದೊರಕಿಸಿ ಕೊಡಲು ಬೆಂಗಳೂರು ಗ್ರಾಮಾಂತರ ಲೋಕಸಭಾಕ್ಷೇತ್ರ ವ್ಯಾಪ್ತಿಯಲ್ಲಿ 100 ನೀರಿನ ಘಟಕಗಳನ್ನು ಸ್ಥಾಪಿಸಿ 10 ಪೈಸೆಗೆ ಲೀಟರ್‌ನಂತೆ ನೀರನ್ನು ನೀಡಲಾ­ಗುವುದು ಎಂದು ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಗೆಲುವಿಗೆ ಕಾರಣಕರ್ತರಾದ ಮತದಾ­ರರು ಮತ್ತು ಕಾರ್ಯಕರ್ತರಿಗೆ ರಾಜರಾ­ಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಅಭಿನಂ­ದನಾ ಸಮಾರಂಭದಲ್ಲಿ ಮಾತ­ನಾ­ಡಿದರು.

ಜನತೆಯ ಋಣವನ್ನು ತೀರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿ ವಾರಕ್ಕೊಮ್ಮೆ ಜನರ ಮಧ್ಯೆ ಇದ್ದು ಕ್ಷೇತ್ರದ ಅಭಿವೃದ್ದಿಗೆ ಆಧ್ಯತೆ ನೀಡುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆ­ದುಕೊಂಡು ಎಲ್ಲರನ್ನು ಒಗ್ಗೂಡಿಸಿ ಜನರ ಸೇವೆಗೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಡಿ.ಕೆ.ಶಿವಕುಮಾರ್ ಹೇಳಿದರು.

ಎಚ್.ಡಿ.ದೇವೇಗೌಡ, ಎಚ್.ಡಿ.­ಕುಮಾ­ರಸ್ವಾಮಿ ಈ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಜನರಿಂದ ತಿರಸ್ಕಾರಗೊಂಡಿದ್ದಾರೆ ಎಂದು ಟೀಕಿಸಿದರು.

ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಹನುಮಂತರಾಯಪ್ಪ, ಮುಖಂ­ಡರಾದ ಟಿ.ಎಂ.ಕೃಷ್ಣ ಮೂರ್ತಿ, ಎಂ.ಮಂಜುನಾಥ್ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ಜಿ.ಮೋಹನ್‌ಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್.­ಶಿವಣ್ಣ, ಮಾಹಿತಿ ತಂತ್ರಜ್ಞಾನ ವಿಭಾಗದ ಅಧ್ಯಕ್ಷ ಎ.ಅಮರ್‌ನಾಥ್, ಮಾಜಿ ಶಾಸಕ ಎಸ್.ರವಿ ಅವರು ಮಾತನಾ­ಡಿದರು.
ಶಾಸಕ ಮುನಿರತ್ನ, ಬಿಬಿಎಂಪಿ ಸದಸ್ಯರಾದ ಗೋವಿಂದ­ರಾಜು,­ವೆಂಕಟೇಶ್‌ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT