ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಇದೇ 12ರಿಂದ ಆರಂಭವಾಗಲಿದೆ. ಒಟ್ಟು 6,15,826 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದು, ರಾಜ್ಯದಾದ್ಯಂತ 984 ಪರೀಕ್ಷಾ ಕೇಂದ್ರಗಳನ್ನು ತೆರೆಯ ಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.

ಪರೀಕ್ಷೆ ತೆಗೆದುಕೊಂಡವರಲ್ಲಿ 4,81,805 ವಿದ್ಯಾರ್ಥಿಗಳು ಹೊಸಬರು. 97,980 ಪುನರಾವರ್ತಿತ ಹಾಗೂ 36,041 ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ತೆಗೆದು ಕೊಂಡಿದ್ದಾರೆ.

ಹೊಸಬರಲ್ಲಿ ಕಲಾ ವಿಭಾಗದಲ್ಲಿ 1,72,613, ವಾಣಿಜ್ಯ ವಿಭಾಗದಲ್ಲಿ 1,66,601 ಹಾಗೂ ವಿಜ್ಞಾನದಲ್ಲಿ 1,42,591 ವಿದ್ಯಾರ್ಥಿಗಳಿದ್ದಾರೆ.

ಪರೀಕ್ಷೆಯಲ್ಲಿ ನಕಲು ಮಾಡುವುದನ್ನು ತಡೆಯಲು ವಿಚಕ್ಷಣಾದಳ ರಚಿಸಲಾಗಿದೆ. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. 12ರಿಂದ ಆರಂಭವಾಗುವ ಪರೀಕ್ಷೆ 27ರಂದು ಮುಕ್ತಾಯವಾಗಲಿದೆ. ಏ.1ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಲು ತೀರ್ಮಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.