ಬುಧವಾರ, ಜೂಲೈ 8, 2020
27 °C

12 ಜನರ ಮೇಲೆ ಹಲ್ಲೆ:ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ:  ತಾಲ್ಲೂಕಿನ ಅತನೂರ್ ಜಿಲ್ಲಾ ಪಂಚಾಯತಿ ಮತಕ್ಷೇತ್ರದ ವ್ಯಾಪ್ತಿಗೆ ಬರುವ ನೀಲೂರ ಗ್ರಾಮದಲ್ಲಿ ಚುನಾವಣೆ ದ್ವೇಷದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಬುಧವಾರ ನಡೆದ ಘರ್ಷಣೆಯಲ್ಲಿ ನೀಲೂರ ಗ್ರಾ.ಪಂ ಅಧ್ಯಕ್ಷ ಸೇರಿದಂತೆ 12 ಜನರ ಮೇಲೆ ಹಲ್ಲೆಯನ್ನು ಮಾಡಲಾಗಿದೆ ಎಂದು ವರದಿಯಾಗಿದೆ.ಮಂಗಳವಾರ ಜಿ.ಪಂ ಮತ್ತು ತಾ.ಪಂ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಾಯಂಕಾಲ ಕಾಂಗ್ರೆಸ್ ಕಾರ್ಯಕರ್ತರು ನೀಲೂರದಲ್ಲಿ ವಿಜಯೋತ್ಸವ ಕುರಿತು ನಡೆದಿರುವ ಮೆರವಣಿಗೆಯಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ. ಗ್ರಾ.ಪಂ ಅಧ್ಯಕ್ಷ ಕೃಷ್ಣ ಬಿಲಕರ ಹಾಗೂ ಅವರ ಕುಟುಂಬ ಮತ್ತು ಬೆಂಬಲಿಗರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದರಿಂದ 12 ಜನರಿಗೆ ಗಾಯಗಳಾಗಿವೆ. ಒಬ್ಬರಿಗೆ ತೀವ್ರ ಗಾಯವಾಗಿದ್ದು ಅವರನ್ನು ಗುಲ್ಬರ್ಗ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.ಈ ಕುರಿತು ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಅವರು ನೀಲೂರ ಗ್ರಾಮಕ್ಕೆ ತೆರಳಿ ತನಿಖೆ ಮುಂದುವರಿಸಿದ್ದಾರೆ. ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ತಮಗೆ ಒತ್ತಡ ತರಲಾಗಿದ್ದು, ಇದಕ್ಕೆ ಒಪ್ಪದೇ ಇರುವುದಕ್ಕೆ ಈ ಹಲ್ಲೆ ನಡೆದಿದೆ ಎಂದು ಗ್ರಾ.ಪಂ ಅಧ್ಯಕ್ಷ ಕೃಷ್ಣ ಬಿಲಕರ ಅವರು ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.