ಬೆಂಗಳೂರು: ರಾಜ್ಯದ 123 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಭೂ ಕಂದಾಯ ಮನ್ನಾ ಮಾಡಲು ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ಆದೇಶ ಹೊರಬೀಳಲಿದೆ.

ಬರ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ಎದುರಿಸಲು ಸರ್ಕಾರ ಸಜ್ಜಾಗಿದ್ದು, ಬರ ಪರಿಹಾರ ಕಾರ್ಯಗಳಿಗೆ ಇದುವರೆಗೆ 310.54 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಹಣದ ಕೊರತೆ ಇಲ್ಲ. ಆದರೆ ಹಲವೆಡೆ ನೀರಿನ ಮೂಲಗಳೇ ಬತ್ತಿ ಹೋಗಿರುವುದು ತಲೆನೋವಾಗಿ ಪರಿಣಮಿಸಿದೆ.

ಸದ್ಯ 292 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬೇಡಿಕೆಯನ್ನು ಆಧರಿಸಿ 35 ಗೋಶಾಲೆಗಳನ್ನು ತೆರೆಯಲಾಗಿದೆ. ಏಪ್ರಿಲ್, ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಧಾವಿಸಿರುವ ಸರ್ಕಾರ, 24 ಜಿಲ್ಲೆಗಳಲ್ಲಿ ಭೂ ಕಂದಾಯ ಮನ್ನಾ ಮಾಡಲು ನಿರ್ಧರಿಸಿದೆ. ವಿವಿಧ ಹಣಕಾಸು ಸಂಸ್ಥೆಗಳಿಂದ ರೈತರು ಪಡೆದಿರುವ ಅಲ್ಪಾವಧಿ ಸಾಲವನ್ನು ಮಧ್ಯಮಾವಧಿ ಸಾಲವನ್ನಾಗಿ, ಮಧ್ಯಮಾವಧಿ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಪರಿವರ್ತಿ ಸಲು ಉದ್ದೇಶಿಸಲಾಗಿದೆ.

ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಸಮಗ್ರವಾದ ವರದಿಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರಿಗೆ ಸಲ್ಲಿಸಲಾಗಿದೆ. ಭೂ ಕಂದಾಯ ಮನ್ನಾ ಬಗ್ಗೆ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಇಲಾಖೆ ಮೂಲಗಳು `ಪ್ರಜಾವಾಣಿ~ಗೆ ತಿಳಿಸಿವೆ.

ಹಣ ಬಿಡುಗಡೆ: ಪ್ರಕೃತಿ ವಿಕೋಪ ನಿಧಿಯಿಂದ ಇದುವರೆಗೆ 172.25 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಕೇಂದ್ರದ ಪಾಲು 126.76 ಕೋಟಿ ರೂಪಾಯಿ ಸೇರಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ, ಪಂಪ್ಸೆಟ್ ಹಾಗೂ ಪೈಪ್ಲೈನ್ಗಳ ದುರಸ್ತಿ ಇತ್ಯಾದಿಗಳಿಗೆ ಈ ಹಣವನ್ನು ವೆಚ್ಚ ಮಾಡಲಾಗುತ್ತಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯು ಕುಡಿಯುವ ನೀರಿನ ತುರ್ತು ಕಾಮಗಾರಿಗಳ ಸಂಬಂಧ 202 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಯನ್ನು ರೂಪಿಸಿ, ಈಗಾಗಲೇ 122.29 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ರಾಜ್ಯ ಹಣಕಾಸು ಆಯೋಗದ ಅನುದಾನದಿಂದ ಹತ್ತು ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿಗಳ ಬಳಿ 126.76 ಕೋಟಿ ರೂಪಾಯಿ ಲಭ್ಯವಿದೆ. ಹಣದ ತೊಂದರೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಬೆಳೆನಷ್ಟ: ಮುಂಗಾರು ಹಂಗಾಮಿನಲ್ಲಿ 69.15 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆಯಾಗಿತ್ತು. ಆದರೆ ಸಕಾಲದಲ್ಲಿ ಮಳೆಯಾಗದ ಕಾರಣ 22.56 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ನಾಶವಾಗಿದ್ದು 4,245.84 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಹಿಂಗಾರು ಹಂಗಾಮಿನಲ್ಲಿ ಒಟ್ಟು 35.55 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ 26.36 ಲಕ್ಷ ಹೆಕ್ಟೇರ್ನಲ್ಲಿ ಮಾತ್ರ ಬಿತ್ತನೆಯಾಗಿದ್ದು, ಈ ಪೈಕಿ ತೇವಾಂಶದ ಕೊರತೆಯಿಂದ 12.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.

ಮೇವಿನ ದರ ಹೆಚ್ಚಳ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 18,275 ಹೆಕ್ಟೇರ್ ಪ್ರದೇಶದಲ್ಲಿ ಮೇವು ಬೆಳೆಯಲು ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಮೇವಿನ ಬೀಜಗಳನ್ನು ಪೂರೈಸಲಾಗಿದೆ. ಇದಲ್ಲದೆ ರಾಜ್ಯದ ಪಶು ಸಂಗೋಪನಾ ಇಲಾಖೆ ವತಿಯಿಂದ 15 ಕೋಟಿ ರೂಪಾಯಿ ವೆಚ್ಚ ದಲ್ಲಿ 47,350 ಹೆಕ್ಟೇರ್ ಪ್ರದೇಶದಲ್ಲಿ ಮೇವು ಬೆಳೆಯಲು ಕ್ರಮ ಕೈಗೊಳ್ಳ ಲಾಗಿದೆ. ಆದರೆ ಬರಪೀಡಿತ ಪ್ರದೇಶಗಳಲ್ಲಿ ಗೋಶಾಲೆಗಳಿಗೆ, ಮೇವು ಬ್ಯಾಂಕ್ಗಳಿಗೆ ತುರ್ತಾಗಿ ಮೇವಿನ ಅಗತ್ಯ ಇದೆ. ಈಗಿರುವ ದರಕ್ಕೆ ಮೇವು ನೀಡಲು ರೈತರು ಮುಂದೆ ಬಾರದ ಕಾರಣ ಮೇವಿನ ಖರೀದಿ ದರವನ್ನು ಹೆಚ್ಚಿಸಲಾಗಿದೆ. ಅದೇ ರೀತಿ ಮೇವಿನ ಸಾಗಾಣಿಕೆ ದರಗಳನ್ನು ಪರಿಷ್ಕರಿಸಲಾಗಿದೆ.

ಜೋಳದ ಪ್ರತಿ ಟನ್ ಒಣಗಿದ ದಂಟಿನ ದರವನ್ನು ರೂ 3,000 ದಿಂದ 4,500ಕ್ಕೆ ಹೆಚ್ಚಿಸಲಾಗಿದೆ. ಮುಸುಕಿನ ಜೋಳದ ಒಣಗಿದ ಮೇವಿನ ಟನ್ ದರವನ್ನು ರೂ 2,000 ದಿಂದ 3,000ಕ್ಕೆ ಏರಿಸಲಾಗಿದೆ. ಬತ್ತ ಮತ್ತು ರಾಗಿಯ ಒಣ ಹುಲ್ಲನ್ನು 2,500ರಿಂದ 4,500ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.
ಪ್ರಸ್ತುತ ಪ್ರತಿ ಕ್ವಿಂಟಲ್ ಮೇವಿನ ಸಾಗಾಣಿಕೆಗೆ ಒಂದು ಕಿ.ಮೀ.ಗೆ ಒಂದು ರೂಪಾಯಿ ನೀಡುತ್ತಿದ್ದು, ಇದನ್ನು ಪರಿಷ್ಕರಿಸಿ ರೂ 1.25ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ ಮೇವು ಸಾಗಾಣಿಕೆಗೆ ಅನುಮತಿಯನ್ನು ಗರಿಷ್ಠ 500 ಕಿ.ಮೀ.ವರೆಗೂ ವಿಸ್ತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.