ಶನಿವಾರ, ಮೇ 28, 2022
24 °C

126 ತಾಲ್ಲೂಕುಗಳು ಕಳ್ಳಬಟ್ಟಿ ಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 126 ತಾಲ್ಲೂಕುಗಳು ಕಳ್ಳಬಟ್ಟಿ ಮುಕ್ತವಾಗಿವೆ. ಹಿಂದೆ 2,048 ಕಳ್ಳಬಟ್ಟಿ ಕೇಂದ್ರಗಳಿದ್ದವು. ಈಗ ಅವುಗಳ ಸಂಖ್ಯೆ 141ಕ್ಕೆ ಇಳಿದಿದೆ ಎಂದು ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಗುರುವಾರ ಇಲ್ಲಿ ತಿಳಿಸಿದರು.

ಬಾಗಲಕೋಟೆ, ವಿಜಾಪುರ, ಬೆಳಗಾವಿ, ಹಾಸನ, ಉತ್ತರ ಕನ್ನಡ ಸೇರಿದಂತೆ ಕೆಲವೆಡೆ ಕಳ್ಳಬಟ್ಟಿ ಹಾವಳಿ ಮುಂದುವರಿದಿದೆ. ಇದನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದೆ. ಹಂತ ಹಂತವಾಗಿ ನಿರ್ಮೂಲನೆ ಆಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್‌ನಿಂದ 341 ಮದ್ಯದ ಅಂಗಡಿಗಳನ್ನು ತೆರೆಯಲು ಪ್ರಸ್ತಾವ ಬಂದಿತ್ತು. ಅವುಗಳಿಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ 319 ಅಂಗಡಿಗಳು ಶುರುವಾಗಿವೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಸ್ತಾವ ಬಂದರೆ ಅನುಮತಿ ನೀಡಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಇಲಾಖೆ ವತಿಯಿಂದ ಈ ವರ್ಷ 11,200 ಕೋಟಿ ರೂಪಾಯಿ ರಾಜಸ್ವ ಸಂಗ್ರಹ ಗುರಿ ಹೊಂದಲಾಗಿದೆ. ಕಳೆದ ವರ್ಷ 9,200 ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಇತ್ತು. ಗುರಿ ಮೀರಿ 9,818 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದರು.

ಏಪ್ರಿಲ್‌ನಲ್ಲಿ 694.57 ಕೋಟಿ ರೂಪಾಯಿ ರಾಜಸ್ವ ಸಂಗ್ರಹಿಸುವ ಗುರಿ ಇತ್ತು. 874.19 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮೇ ತಿಂಗಳಲ್ಲಿ 758.14 ಕೋಟಿ ರೂಪಾಯಿ ಸಂಗ್ರಹಿಸುವ ಗುರಿ ಇತ್ತು. ಗುರಿ ಮೀರಿ 881.09 ಕೋಟಿ ರೂಪಾಯಿ ಸಂಗ್ರಹವಾಗಿದೆ. ಮದ್ಯದ ಮಾರಾಟದಲ್ಲೂ ಹೆಚ್ಚಳ ಕಂಡು ಬಂದಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.