ಗುರುವಾರ , ಮೇ 19, 2022
24 °C
ಸರ್ವೆ ದರ ಎಕರೆಗೆ 800 ರೂಪಾಯಿ

130 ಭೂಮಾಪಕರಿಗೆ ನೇಮಕಾತಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಭೂಮಾಪಕರ ಆಯ್ಕೆ ಪಟ್ಟಿಯಿಂದ ಕೈಬಿಟ್ಟಿದ್ದ 130 ಅಭ್ಯರ್ಥಿಗಳಿಗೂ ನೇಮಕಾತಿ ಆದೇಶ ನೀಡಲು ಸರ್ಕಾರ ನಿರ್ಧರಿಸಿದೆ. ವಾರದೊಳಗೆ ಆದೇಶ ನೀಡಲಾಗುವುದು ಎಂದು ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ಅವರು ಸೋಮವಾರ ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ಅವಧಿಯಲ್ಲಿ ಬಿಎಸ್‌ಆರ್ ಕಾಂಗ್ರೆಸ್‌ನ ಪಿ.ರಾಜೀವ್ ಅವರ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು.

`1,834 ಭೂಮಾಪಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ಸಂದರ್ಭದಲ್ಲಿ 130 ಜನರು ಅಧಿಕೃತವಲ್ಲದ ಸಂಸ್ಥೆಗಳಿಂದ ಸೇವಾ ದೃಢೀಕರಣ ಪತ್ರ ಪಡೆದು ಸಲ್ಲಿಸಿರುವುದು ಪತ್ತೆಯಾಗಿತ್ತು. ಅವರನ್ನು ಅಂತಿಮ ಆಯ್ಕೆಪಟ್ಟಿಯಿಂದ ಕೈಬಿಡಲಾಗಿತ್ತು. ಉಳಿದ ಎಲ್ಲಾ ಅರ್ಹತೆಗಳನ್ನು ಪರಿಗಣಿಸಿ ಅವರಿಗೂ ಉದ್ಯೋಗ ನೀಡಲು ಸರ್ಕಾರ ತೀರ್ಮಾನಿಸಿದೆ' ಎಂದು ಶ್ರೀನಿವಾಸ ಪ್ರಸಾದ್ ಅವರು ತಿಳಿಸಿದರು.ರಾಜ್ಯದಲ್ಲಿ ಒಟ್ಟು 2,240 ಭೂಮಾಪಕರ ಹುದ್ದೆಗಳು ಖಾಲಿ ಇವೆ. ಈ ಪೈಕಿ 1,834 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನೇಮಕಾತಿ ಪ್ರಕ್ರಿಯೆ ಆರಂಭಕ್ಕೂ ಮುನ್ನವೇ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರಕಟಿಸಲಾಗಿತ್ತು. 130 ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದ ಸೇವಾ ದೃಢೀಕರಣ ಪತ್ರ ಸಲ್ಲಿಸಿರಲಿಲ್ಲ ಎಂಬುದರ ಹೊರತಾಗಿ ಎಲ್ಲ ಅರ್ಹತೆಗಳನ್ನೂ ಹೊಂದಿದ್ದರು ಎಂದು ಹೇಳಿದರು.ದರ ಪರಿಷ್ಕರಣೆ

ಪರವಾನಗಿ ಪಡೆದ ಭೂಮಾಪಕರ ಸೇವಾ ದರವನ್ನೂ ಪರಿಷ್ಕರಿಸಲು ಯೋಚಿಸಲಾಗಿದೆ. ಪ್ರಸ್ತುತ 1 ರಿಂದ 10 ಎಕರೆವರೆಗಿನ ಜಮೀನಿನ ಸರ್ವೆಗೆ ಒಂದೇ ದರ ಇದೆ. ಮುಂದಿನ ದಿನಗಳಲ್ಲಿ ಪ್ರತಿ ಎಕರೆ ಜಮೀನಿನ ಸರ್ವೆಗೆ 800 ರೂಪಾಯಿ ದರ ನಿಗದಿ ಮಾಡುವ ಚಿಂತನೆ ನಡೆದಿದೆ. ಅವರಿಗೆ ಸೇವಾ ಭದ್ರತೆಯನ್ನೂ ಒದಗಿಸಲಾಗುವುದು ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.