ಗುರುವಾರ , ಮೇ 6, 2021
31 °C

14ರಿಂದ ಅತಿಥಿ ಉಪನ್ಯಾಸಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 359 ಸರ್ಕಾರಿ ಪದವಿ ಕಾಲೇಜುಗಳಿಗೆ 10,300 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಶುಕ್ರವಾರದಿಂದ (ಜೂನ್ 14) ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪನ್ಯಾಸಕರ ನೇಮಕಾತಿಯ ಮಾರ್ಗಸೂಚಿಗಳ ವಿವರಗಳನ್ನು ಉನ್ನತ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಜೂನ್ 14ರಂದು ದಿನಪತ್ರಿಕೆಗಳಲ್ಲಿ ಜಾಹೀರಾತನ್ನೂ ಪ್ರಕಟಿಸಲಾಗುವುದು ಎಂದರು.`ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ಮತ್ತು ಸಂಪೂರ್ಣ ಪಾರದರ್ಶಕವಾದ ರೀತಿಯಲ್ಲಿ ನಡೆಸಲಾಗುವುದು. ಜುಲೈ 15ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಲು ತೀರ್ಮಾನಿಸಲಾಗಿದೆ' ಎಂದು ಹೇಳಿದರು.ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮಾಸಿಕ 10 ಸಾವಿರ ರೂಪಾಯಿ ಗೌರವ ಧನ ನೀಡಲಾಗುವುದು. ಸ್ನಾತಕೋತ್ತರ ಪದವಿ ಮಾತ್ರ ಪಡೆದಿರುವವರಿಗೆ ಮಾಸಿಕ 8 ಸಾವಿರ ರೂಪಾಯಿ  ಗೌರವ ಧನ ನೀಡಲಾಗುವುದು ಎಂದು ವಿವರಿಸಿದರು.ಕಳೆದ ವರ್ಷ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ಗೊಂದಲಮಯವಾಗಿತ್ತು. ನವೆಂಬರ್ ತಿಂಗಳವರೆಗೂ ನೇಮಕಾತಿ ನಡೆಯುತ್ತಲೇ ಇತ್ತು. ಕಳೆದ ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದವರಿಗೆ 52 ಕೋಟಿ ರೂಪಾಯಿ ಗೌರವ ಧನ ಪಾವತಿ ಬಾಕಿ ಇತ್ತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ 27.89 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಉಳಿದ ಮೊತ್ತವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.ರಾಜ್ಯದಲ್ಲಿ ಉನ್ನತ ಶಿಕ್ಷಣ ಪಡೆಯುವವರ ಸರಾಸರಿ ಹೆಚ್ಚಿಸುವ ಗುರಿ ಸರ್ಕಾರದ ಮುಂದಿದೆ. ರಾಷ್ಟ್ರಮಟ್ಟದಲ್ಲಿ ಈ ಸರಾಸರಿ ಶೇ 18 ಇದೆ. ರಾಜ್ಯದಲ್ಲಿ ಈ ಪ್ರಮಾಣ ಶೇ 24 ಇದೆ. 2020ರ ವೇಳೆಗೆ ಶೇ 35ರಷ್ಟನ್ನು ತಲುಪುವ ಗುರಿ ಇದೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.