14 ದಿನ ನ್ಯಾಯಾಂಗ ಬಂಧನಕ್ಕೆ ಮುಷರಫ್

7

14 ದಿನ ನ್ಯಾಯಾಂಗ ಬಂಧನಕ್ಕೆ ಮುಷರಫ್

Published:
Updated:

ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರನ್ನು ಇಲ್ಲಿನ ಭಯೋತ್ಪಾದಕ ನಿಗ್ರಹ ನ್ಯಾಯಾಲಯವು ಶನಿವಾರ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.



ಮುಷರಫ್ ಅವರು ಅಧ್ಯಕ್ಷರಾಗಿದ್ದ 2007ರ ತುರ್ತುಪರಿಸ್ಥಿತಿ ಅವಧಿಯಲ್ಲಿ 60 ನ್ಯಾಯಾಧೀಶರನ್ನು ಪದುಚ್ಯುತಗೊಳಿಸಿ, ಬಂಧಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರಷ್ಟೇ ಪೊಲೀಸರು ಅವರನ್ನು ಬಂಧಿಸಿದ್ದರು.



ನ್ಯಾಯಾಮೂರ್ತಿ ಕೌಸರ್ ಅಬ್ಬಾಸ್ ಜೈದಿ ಅವರು ಪ್ರಕರಣದ ವಿಚಾರಣೆ ನಡೆಸಿ, ಮುಷರಫ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಮೇ 4ರಂದು ನ್ಯಾಯಾಲಯಕ್ಕೆ ಪುನಃ ಹಾಜರಾಗಬೇಕೆಂದು ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು.



ಪ್ರಕರಣಕ್ಕೆ ಸಂಬಂಧಿಸಿದಂತೆ ಮುಷರಫ್ ಅವರನ್ನು ಪೊಲೀಸರು ಶುಕ್ರವಾರ ಬೆಳಗಿನ ಜಾವ ಬಂಧಿಸಿ, ನ್ಯಾಯಾಲಯದಲ್ಲಿ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಎರಡು ದಿನಗಳ ಕಾಲ ಅವರನ್ನು ಪೊಲೀಸರು ವಶಕ್ಕೆ ನೀಡಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry