15ಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಆಯ್ಕೆ

6

15ಕ್ಕೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರ ಆಯ್ಕೆ

Published:
Updated:

ಔರಾದ್: ಇಲ್ಲಿಯ ತಾಲ್ಲೂಕು ಪಂಚಾಯ್ತಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇದೇ 15ಕ್ಕೆ ನಿಗದಿಯಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಒಟ್ಟು 23 ಸದಸ್ಯ ಬಲದ ತಾಪಂನಲ್ಲಿ 16 ಸ್ಥಾನ ಹೊಂದಿರುವ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲಿದೆ. 4 ಕಾಂಗ್ರೆಸ್, 2 ಜೆಡಿಎಸ್, ಒಬ್ಬರು ಸ್ವತಂತ್ರ ಅಭ್ಯರ್ಥಿ ಇದ್ದು, ಅವರು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ.ಕಮಲನಗರ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ನೀಲಕಂಠ ಕಾಂಬಳೆ ಮತ್ತು ಮದನೂರ ಕ್ಷೇತ್ರದಿಂದ ಆಯ್ಕೆಯಾದ ಶ್ರೀರಂಗ ಅಧ್ಯಕ್ಷ ಸ್ಥಾನದ ದಾವೇದಾರರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಧುಪತಮಹಾಗಾಂವ್ ಕ್ಷೇತ್ರದ ಸರಸ್ವತಿ ಪಾಟೀಲ, ಸುಂದಾಳ ಕ್ಷೇತ್ರದ ಜೈಶ್ರೀ ಘಾಟೆ ಸೇರಿದಂತೆ ನಾಲ್ಕೈದು ಮಹಿಳೆಯರು ಪೈಪೋಟಿಯಲ್ಲಿದ್ದಾರೆ.ಸಭೆ: ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಕುರಿತು ಚರ್ಚಿಸಲು ಶನಿವಾರ ಶಾಸಕ ಪ್ರಭು ಚವ್ಹಾಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಗೊತ್ತಾಗಿದೆ. ಈ ಸಭೆಯಲ್ಲಿ ಔಪಚಾರಿಕವಾಗಿ ಚರ್ಚೆಯಾದರೂ 14ರಂದು ಮತ್ತೊಮ್ಮೆ ಸಭೆ ಸೇರಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry