ಸೋಮವಾರ, ಏಪ್ರಿಲ್ 19, 2021
32 °C

15ರಂದು ರಾಷ್ಟ್ರೀಯ ನೃತ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ರಾಜರಾಜೇಶ್ವರಿ ನೃತ್ಯ ಕಲಾ ಮಂದಿರ ಟ್ರಸ್ಟ್ ತನ್ನ ಸುವರ್ಣ ಮಹೋತ್ಸವದ ಪ್ರಯುಕ್ತ `ನೂಪುರ ಚರಣ~ ರಾಷ್ಟ್ರೀಯ ನೃತ್ಯೋತ್ಸವವನ್ನು ಹತ್ತು ದಿನಗಳ ಕಾಲ ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ  ನ.15 ರಂದು ಆಯೋಜಿಸಿದೆ~ ಎಂದು ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷ ಕೆ.ಎಂ. ರಾಮನ್ ಹೇಳಿದರು.ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ ರಾಜೇಶ್ವರಿ ನೃತ್ಯ ಕಲಾ ಮಂದಿರವು 50 ವರ್ಷಗಳಿಂದ ನೃತ್ಯ ಕಲೆಗಳನ್ನು ಪೋಷಿಸುತ್ತ ಬಂದಿದೆ. ಹತ್ತು ದಿನಗಳು ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 800 ಜನ ಕಲಾವಿದರು ಭಾಗವಹಿಸಲಿದ್ದಾರೆ.

 

ನ. 15 ರಂದು ಗುಣವತಿ ಪ್ರಭಾಕರ್ ಹಾಗೂ ಹರೀಶ್ ರಾಮನ್ ಅವರಿಂದ ಭರತನಾಟ್ಯ ಕಾರ್ಯಕ್ರಮ, ನೃತ್ಯ ಕಲಾಮಂದಿರದ ವಿದ್ಯಾರ್ಥಿಗಳಿಂದ ಗಣೇಶ ನೃತ್ಯ ರೂಪಕ ಕಾರ್ಯಕ್ರಮವು ನಡೆಯಲಿದೆ. ಹೀಗೆ ಹತ್ತು ದಿನಗಳ ಕಾರ್ಯಕ್ರಮದಲ್ಲಿ ಕಲಾರಸಿಕರ ಮನ ತಣಿಸುವ ಅನೇಕ ಕಾರ್ಯಕ್ರಮಗಳು ನಡೆಯಲಿವೆ~ ಎಂದು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.