ಮಂಡ್ಯ: ತಾಲ್ಲೂಕಿನಲ್ಲಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಏಪ್ರಿಲ್ 15 ರಂದು ಎರಡನೇ ಹಂತದ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಯಾವ ಮಗುವೂ ಲಸಿಕೆ ಹಾಕುವುದರಿಂದ ವಂಚಿತರಾಗದಂತೆ ಕ್ರಮ ವಹಿಸಬೇಕೆಂದು ಮಂಡ್ಯ ತಾಲ್ಲೂಕು ತಹಶೀಲ್ದಾರ್ ರಾಜೇಂದ್ರ ಪ್ರಸಾದ್ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ತಾಲ್ಲೂಕು ವೈದ್ಯಾಧಿಕಾರಿಗಳ ಸಭಾಂಗಣದಲ್ಲಿ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಮೊದಲನೇ ಹಂತದ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿತ್ತು.

ಏಪ್ರಿಲ್ 15ರ ನಡೆಯಲಿರುವ ಎರಡನೇ ಹಂತದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕಾಗಿ ನಗರದಲ್ಲಿ 63 ಲಸಿಕಾ ಕೇಂದ್ರಗಳು, ಗ್ರಾಮೀಣ ಪ್ರದೇಶದಲ್ಲಿ 128 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ 0-5 ವರ್ಷದೊಳಗಿನ ಮಕ್ಕಳಿಗೆ ಪೊಲಿಯೋ ಲಸಿಕೆಯನ್ನು ಹಾಕಿಸಲು ಸಹಕರಿಸಬೇಕೆಂದು ತಿಳಿಸಿದರು.

ದಕ್ಷಿಣ, ಉತ್ತರ ವಲಯದ ಶಿಕ್ಷಣ ಇಲಾಖಾ ಅಧಿಕಾರಿಗಳು ಆಯಾ ಗ್ರಾಮದ ಶಾಲಾ ಕೊಠಡಿ ಹಾಗೂ ಅಂಗನವಾಡಿ ಕೇಂದ್ರಗಳು ಬೆಳಿಗ್ಗೆಯೇ ತೆರೆಯಲು ಕ್ರಮ ಕೈಗೊಳ್ಳಬೇಕು. ಪಲ್ಸ್ ಪೊಲಿಯೋ ಕಾರ್ಯಕ್ರಮದ ಬಗ್ಗೆ ಗ್ರಾಮೀಣ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿ.ಕೆ. ಸುರೇಶ್, ರೆಡ್ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ, ರೋಟರಿ ಸಂಸ್ಥೆಯ ಕಾರ್ಯದರ್ಶಿ ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.