ಮಂಗಳವಾರ, ಜೂನ್ 22, 2021
22 °C

15ರಿಂದ ದ್ವಿತೀಯ ಪಿಯು ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ 15ರಿಂದ 31ರವರೆಗೆ ನಡೆಯಲಿದ್ದು, ಪರೀಕ್ಷೆಗಾಗಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷೆಯಲ್ಲಿ ನಕಲು ತಡೆಗೆ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಇಲ್ಲಿ ತಿಳಿಸಿದರು. ರಾಜ್ಯದ ಒಟ್ಟು 923 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಸಕ್ತ ಸಾಲಿನಲ್ಲಿ 5,96,739 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳುತ್ತಿದ್ದು, ಎಲ್ಲೆಡೆ ಜಾಗೃತ ದಳಗಳನ್ನು ನಿಯೋಜಿಸಲಾಗುವುದು ಎಂದು ಅವರು  ಸುದ್ದಿಗಾರರಿಗೆ ತಿಳಿಸಿದರು.ಹಿಂದಿನ ಪರೀಕ್ಷೆ ವೇಳೆ ನಡೆದ ನಕಲು ಘಟನೆಗಳನ್ನು ಆಧರಿಸಿ 80 ಅತಿಸೂಕ್ಷ್ಮ ಹಾಗೂ 87 ಸೂಕ್ಷ್ಮ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, ಇಲ್ಲಿ ಹೆಚ್ಚಿನ ನಿಗಾ ಇಡಲು ಸೂಚಿಸಲಾಗಿದೆ ಎಂದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ವಿವಿಧ ದರ್ಜೆಯ ಅಧಿಕಾರಿಗಳನ್ನು ಜಾಗೃತದಳದ ಸದಸ್ಯರನ್ನಾಗಿ ನಿಯೋಜಿಸಲಾಗಿದೆ. ಅಗತ್ಯ ಇರುವ ಕಡೆ ವಿಶೇಷ ಜಾಗೃತ ದಳವನ್ನೂ ರಚಿಸಲಾಗುವುದು ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.