15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

7

15 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Published:
Updated:

ಬೆಂಗಳೂರು: ಗಾಂಧಿನಗರ ವಾರ್ಡ್‌ಗೆ 26ರಂದು ನಡೆಯಲಿರುವ ಉಪ ಚುನಾವಣೆಗೆ ಒಟ್ಟು 15 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇವರಲ್ಲಿ ಐವರು ಪ್ರಮುಖ ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಿದ್ದರೆ, 10 ಮಂದಿ ಪಕ್ಷೇತರರಾಗಿದ್ದಾರೆ.ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಬುಧವಾರ ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಕಡೇ ದಿನ. ಅಂದೇ ಮಧ್ಯಾಹ್ನ ಅಭ್ಯರ್ಥಿಗಳಿಗೆ `ಚಿಹ್ನೆ~ ಹಂಚಿಕೆ ಮಾಡಲಾಗುತ್ತದೆ ಎಂದು ಗಾಂಧಿನಗರ ವಾರ್ಡ್ ಉಪ ಚುನಾವಣೆಯ ಚುನಾವಣಾಧಿಕಾರಿ ಎಲ್. ನಾಗರಾಜ್ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿಗಳು: ಶಿವರಾಮಣ್ಣ, ಕೆ. ರಮೇಶ್, ಎಸ್.ಎನ್. ರಮೇಶ್, ಶಂಭುಲಿಂಗೇಗೌಡ, ಮಹೇಶ್ ಯಾದವ್, ಫರೂಕ್ ಪಾಶ, ಗೌಸ್ ಫಹಿಯುದ್ದೀನ್, ಸಿ.ಜಿ.ಕೆ. ರಾಮು, ಅಬ್ದುಲ್ ಗಫಾರ್ ಹಾಗೂ ಗೋವಿಂದಸ್ವಾಮಿ.29ರಂದು ಗಾಂಧಿನಗರ ಕಾನಿಷ್ಕ ಹೋಟೆಲ್ ಬಳಿಯಿರುವ ಪಾಲಿಕೆ ಬಾಲಕಿಯರ ಪ್ರೌಢಶಾಲೆಯಲ್ಲಿ ಮತ ಎಣಿಕೆ ನಡೆಯಲಿದೆ. ಇದೇ ಶಾಲೆಯಲ್ಲಿ ಮಸ್ಟರಿಂಗ್ ಹಾಗೂ ಡಿ-ಮಸ್ಟರಿಂಗ್ ಪ್ರಕ್ರಿಯೆ ಕೂಡ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry