ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ಕ್ಕೆ ಕೃಷಿ ವಿ.ವಿ ಸಂಸ್ಥಾಪನಾ ದಿನಾಚರಣೆ

Last Updated 12 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಯಲಹಂಕ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಇದೇ 15ರಂದು ವಿ.ವಿ ಆವರಣದಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.

ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿ.ವಿ ಕುಲಪತಿ ಡಾ.ಕೆ. ನಾರಾಯಣಗೌಡ, `ಇದೇ 15ರಂದು ನಡೆಯಲಿರುವ ಸಂಸ್ಥಾಪನಾ ದಿನಾಚರಣೆ ಸಮಾರಂಭವನ್ನು ಸೆಲ್ಕೋ ಸೋಲಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಹರೀಶ್ ಹಂದೆ ಉದ್ಘಾಟಿಸಲಿದ್ದಾರೆ. ಕೃಷಿ ಇಲಾಖೆ ಕಾರ್ಯದರ್ಶಿ ಡಾ.ಸಂದೀಪ್ ದವೆ ಇತರರು ಭಾಗವಹಿಸಲಿದ್ದಾರೆ~ ಎಂದರು.

ಇದೇ ಸಂದರ್ಭದಲ್ಲಿ ಇಬ್ಬರಿಗೆ `ಅತ್ಯುತ್ತಮ ವಿಜ್ಞಾನಿ ಪ್ರಶಸ್ತಿ~ ಮತ್ತು ಒಬ್ಬರಿಗೆ `ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ~ ನೀಡಿ ಗೌರವಿಸಲಾಗುವುದು. ಹಾಗೆಯೇ ಮೂರು ಮಂದಿ ಪ್ರಾಧ್ಯಾಪಕರಿಗೆ `ಅತ್ಯುತ್ತಮ ಪ್ರಾಧ್ಯಾಪಕ ಪ್ರಶಸ್ತಿ~ ಪ್ರದಾನ ಮಾಡಲಾಗುವುದು. ಅಲ್ಲದೆ ಸಂಶೋಧನೆ ನಡೆಸಲು ಇತರೆ ಸಂಸ್ಥೆಗಳಿಂದ ಅನುದಾನ ಪಡೆಯಲು ಸಹಕರಿಸಿದ 30 ಮಂದಿ ವಿಜ್ಞಾನಿಗಳಿಗೆ ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು. ಪ್ರಸಕ್ತ ವರ್ಷದಲ್ಲಿ ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆಯ ಕತ್ತಲಗೆರೆಯಲ್ಲಿ ಡಿಪ್ಲೊಮಾ ಕೋರ್ಸ್‌ಗಳನ್ನು ಆರಂಭಿಸಲಾಗಿದೆ ಎಂದರು.

ರಾಷ್ಟ್ರೀಯ ಕೃಷಿಮೇಳ
ವಿಶ್ವವಿದ್ಯಾಲಯದ ವತಿಯಿಂದ ನವೆಂಬರ್ 16ರಿಂದ 20ರವರೆಗೆ ಐದು ದಿನ ಕಾಲ ರಾಷ್ಟ್ರೀಯ ಕೃಷಿ ಮೇಳವನ್ನು ಆಯೋಜಿಸಲಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯ ಮತ್ತು ಇತರೆ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಮಾತ್ರವಲ್ಲದೇ ಇತರೆ ರಾಜ್ಯಗಳ ರೈತರಿಗೂ ತಲುಪಿಸುವುದು.
ಇತರೆ ವಿಶ್ವವಿದ್ಯಾಲಯಗಳು ಹಾಗೂ ಸಂಸ್ಥೆಗಳು ಅಭಿವೃದ್ಧಿಪಡಿಸಿರುವ ತಂತ್ರಜ್ಞಾನವನ್ನು ರಾಜ್ಯದ ರೈತರಿಗೆ ಪರಿಚಯಿಸಲಾಗುವುದು ಈ ಮೇಳದ ಉದ್ದೇಶ~ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT