ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15ರಂದು ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶ: ಅಮ್ಜದ್

Last Updated 12 ಜುಲೈ 2012, 9:10 IST
ಅಕ್ಷರ ಗಾತ್ರ

ರಾಯಚೂರು: ಕರ್ನಾಟಕ ಪ್ರದೇಶ ಜೆಡಿಎಸ್ ಘಟಕದಿಂದ ಬೆಂಗಳೂರಿನಲ್ಲಿ ಮುಸ್ಲಿಂ ಸಮಾವೇಶವನ್ನು ಇದೇ 15ರಂದು ಆಯೋಜಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಮ್ಜದ್ ಹುಸೇನ್ ಅವರು ತಿಳಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮಾಜದ ಬೆಳವಣಿಗೆಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ ದೇವಗೌಡ ಅವರು ಶ್ರಮಿಸುತ್ತಿದ್ದಾರೆ. ಆದರೆ, ಬೇರೆ ಯಾವುದೇ ರಾಜಕೀಯ ಪಕ್ಷಗಳಿಂದ ಮುಸ್ಲಿಂ ಸಮಾಜ ಬೆಳವಣಿಗೆ ಕುರಿತು ಚಿಂತನೆ ನಡೆಸಿಲ್ಲ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರನ್ನಾಗಿ ಅಪ್ಸರ್ ಆಗಾ ಅವರನ್ನು ಆಯ್ಕೆ ಮಾಡುವುದರ ಮೂಲಕ ಮುಸ್ಲಿಂ ಸಮಾಜದ ಬಗ್ಗೆ ಜೆಡಿಎಸ್ ಪಕ್ಷ ತನಗಿರುವ ಕಾಳಜಿಯನ್ನು ಸಾಬೀತುಪಡಿಸಿದೆ. ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಅಪ್ಸರ್ ಆಗಾ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಮಹಾಂತೇಶ ಪಾಟೀಲ್ ಅತ್ತನೂರು ಮಾತನಾಡಿ, ಜೆಡಿಎಸ್ ಪಕ್ಷವು ಮುಸ್ಲಿಂ ಸಮಾಜಕ್ಕೆ ರಾಜಕೀಯವಾಗಿ ಬೆಳೆಯಲು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಒಟ್ಟು 5 ಸಾವಿರ  ಜನ ಮುಸ್ಲಿಂ ಬಾಂಧವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಈ ರಾಜ್ಯ ಮಟ್ಟದ ಸಮಾವೇಶದಲ್ಲಿ ರಾಜ್ಯದ ಒಟ್ಟು 5 ಲಕ್ಷಕ್ಕೂ ಹೆಚ್ಚಿನ ಮುಸ್ಲಿಂ ಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ 20 ತಿಂಗಳು ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಕೈಗೊಂಡ ಕಾರ್ಯಕ್ರಮಗಳ ಕುರಿತ ಮಾಹಿತಿ ನೀಡಲಾಗುವುದು.ಈ ಸಮಾವೇಶಕ್ಕೆ ಮುಸ್ಲಿಂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ವಕ್ತಾರ ಎಂ.ವಿರೂಪಾಕ್ಷಿ ಮಾತನಾಡಿ, ನಗರದಿಂದ ಸಮಾವೇಶಕ್ಕೆ ತೆರಳುವ ಮುಸ್ಲಿಂ ಬಾಂಧವರಿಗೆ  ನಗರದ ಜೆಡಿಎಸ್ ಕಾರ್ಯಾಲಯದಿಂದ ವಾಹನಗಳ ವ್ಯವಸ್ಥೆ ಮಾಡಲಾಗಿದೆ. ನಗರದಿಂದ 3 ಬಸ್, 24 ಟ್ರ್ಯಾಕ್ಸ್ ಮಾಡಲಾಗಿದೆ. ತಾಲ್ಲೂಕು ಮಟ್ಟದಿಂದ 15-20 ವಾಹನ ಸಮಾವೇಶಕ್ಕೆ ತೆರಳಲಿವೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಶಿವಶಂಕರ ವಕೀಲ, ಅರಾಫತ್, ಚಾಂದ್‌ಪಾಷಾ, ನಗರ ಘಟಕದ ಅಧ್ಯಕ್ಷ ಬಿ ತಿಮ್ಮಾರೆಡ್ಡಿ, ನಗರ ಯುವ ಘಟಕದ ಅಧ್ಯಕ್ಷ ರಾಮಕೃಷ್ಣ, ಎಸ್‌ಸಿ,ಎಸ್‌ಟಿ ಘಟಕದ ನರಸಪ್ಪ ಪತ್ರಿಕಾಗೋಷ್ಠಿಯಲ್ಲಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT