ಸೋಮವಾರ, ಜನವರಿ 20, 2020
20 °C

16ರಂದು ದಿನಗೂಲಿ ನೌಕರರ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಸರ್ಕಾರಿ ದಿನಗೂಲಿ ನೌಕರರ ಸಮಾವೇಶವನ್ನು ಜ. 16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಹೋರಾಟ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಹೇಳಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮಾವೇಶ ಉದ್ಘಾಟಿಸಲಿದ್ದು, ಸಚಿವರಾದ ಸಿ.ಎಂ. ಉದಾಸಿ, ಬಸವರಾಜ ಬೊಮ್ಮಾಯಿ, ರೇವುನಾಯಕ ಬೆಳಮಗಿ, ಶೋಭಾ ಕರಂದ್ಲಾಜೆ, ನರಸಿಂಹ ನಾಯಕ (ರಾಜೂಗೌಡ) ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾರ್ಯಕ್ರಮಕ್ಕೆ ಆಗಮಿಸುವ ಅಥಿತಿಗಳೊಂದಿಗೆ ಜಗತ್‌ವೃತ್ತದಿಂದ ಕನ್ನಡ ಭವನದವರೆಗೆ ಭವ್ಯ ಮೆರವಣಿಗೆ ನಡೆಸಲಾಗುವುದು. ಇದಕ್ಕೂ ಮುಂಚೆ ಬೆಳಿಗ್ಗೆ 9ಕ್ಕೆ ನಗರದ ಗೋವಾ ಹೋಟೆಲ್ ಹತ್ತಿರದ ಅಶೋಕ ಭೋವಿ ಕಾಂಪ್ಲೆಕ್ಸ್‌ನಲ್ಲಿ ಶ್ರಮಜೀವಿಗಳ ವೇದಿಕೆಯ ನೂತನ ಕಾರ್ಯಾಲಯ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.ಒತ್ತಾಯ: ಬಹುದಿನಗಳಿಂದ ಸಚಿವ ಸಂಪುದ ಒಪ್ಪಿಗೆಗೆ ಕಾದಿರುವ ದಿನಗೂಲಿ ನೌಕರರ ಕಾಯಮಾತಿ ಅತಿ ಶೀಘ್ರದಲ್ಲಿ ಮಾಡಬೇಕು, ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಕಾರ್ಮಿಕ ಇಲಾಖೆ ನೀಡಿದ ಆದೇಶವನ್ನು ಕಾರ್ಯರೂಪಕ್ಕೆ ತಂದು ಅವರಿಗೆ ಕನಿಷ್ಠ ವೇತನ ಪಾವತಿಸುವುದು, ಗ್ರಾ.ಪಂ.ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂಪ್ಯೂಟರ್ ಆಪ್‌ರೇಟರ್‌ಗಳಿಗೆ ವಿನಾಕಾರಣ ಕಿರುಕುಳ ನೀಡುವುದನ್ನು ತಪ್ಪಿಸಬೇಕು, ವಜಾಗೊಳಿಸುವುದನ್ನು ತಡೆ ಹಿಡಿಯಬೇಕು, 8 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜೆಸ್ಕಾಂ ಗ್ರಾಮ ವಿದ್ಯುತ್ ಪ್ರತಿನಿಧಿಗಳ ಸೇವಾ ಭದ್ರತೆ ನೀಡುವುದು ಮುಂತಾದ ಸಮಸ್ಯೆಗಳ ಪರಿಹಾರಕ್ಕಾಗಿ ಸಮಾವೇಶದಲ್ಲಿ ಒತ್ತಾಯಿಸಲಾಗುವುದು ಎಂದರು.

ಪ್ರತಿಕ್ರಿಯಿಸಿ (+)