ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

16 ರಂದು ದಸರಾ ವಿಧ್ಯುಕ್ತ ಆರಂಭ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮೈಸೂರು: ಈ ಬಾರಿಯ ದಸರಾ ಮಹೋತ್ಸವ ಅ.16 ರಂದು ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಧ್ಯುಕ್ತವಾಗಿ ಅರಂಭಗೊಳ್ಳಲಿದೆ.

ಅಂದು ಬೆಳಿಗ್ಗೆ 10.42 ಗಂಟೆಗೆ ವಿಜಾಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ.ರಾಮದಾಸ್ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅ.24 ರಂದು ವಿಜಯದಶಮಿ ಜಂಬೂ ಸವಾರಿ ನಡೆಯಲಿದ್ದು, ಅಂದು ಮಧ್ಯಾಹ್ನ 1.47 ಕ್ಕೆ ಸರಿಯಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನಂದಿಕಂಬಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡುವರು ಎಂದು ಹೇಳಿದರು.

ಮೈಸೂರು ಜಿಲ್ಲಾಡಳಿತದ ವತಿಯಿಂದ ಅ. 11 ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸಚಿವರು ಹಾಗೂ ಜನಪ್ರತಿನಿಧಿಗಳಿಗೆ ಅಧಿಕೃತ ಆಹ್ವಾನ ನೀಡಲಾಗುವುದು. ಅ.12 ರಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್, ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಅವರನ್ನು ಆಹ್ವಾನಿಸಲಾಗುವುದು.

ಅ.13 ರಂದು ಮೈಸೂರು ಜಿಲ್ಲೆಯ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗುವುದು ಎಂದು ಮಾಹಿತಿ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT