ಬೆಂಗಳೂರು: ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 17 ರಂದು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನೆ ಹಮ್ಮಿಕೊಂಡಿದೆ.

`ಮಕ್ಕಳನ್ನು ಶಿಕ್ಷಣದೆಡೆಗೆ ಆಕರ್ಷಿಸುವ ಸಲುವಾಗಿ ತಂದ ಬಿಸಿಯೂಟದ ಯೋಜನೆಯಲ್ಲಿ ಕನಿಷ್ಠ ಉದ್ಯೋಗ ಭದ್ರತೆಯಿಲ್ಲದೇ ಅಡುಗೆ ಸಹಾಯಕರಾಗಿ ದುಡಿಯುತ್ತಿರುವ ಸಾವಿರಾರು ಮಹಿಳೆಯರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

`ಸರ್ಕಾರವು ಈ ಯೋಜನೆಯನ್ನು ಸರ್ಕಾರೇತರ ಸಂಸ್ಥೆಗಳಿಗೆ ಹಸ್ತಾಂತರಿಸುವ ಮೂಲಕ ಖಾಸಗೀಕರಣಗೊಳಿಸುತ್ತಿದೆ. ಇದರಿಂದ 30 ಸಾವಿರ ಮಹಿಳೆಯರು ನಿರುದ್ಯೋಗಿಗಳಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು~ ಎಂದು ಒತ್ತಾಯಿಸಿದರು.

`ನೌಕರರನ್ನು ಖಾಯಂಗೊಳಿಸಬೇಕು. ಸಾಮಾಜಿಕ ಭದ್ರತೆ ಒಳಗೊಂಡಂತೆ ಇಎಸ್ಐ, ಭವಿಷ್ಯ ನಿಧಿ ಮತ್ತು ನಿವೃತ್ತಿ ವೇತನ ದೊರೆಯುವಂತೆ ಮಾಡಬೇಕು. ಇದರೊಂದಿಗೆ ರಾಜ್ಯದಾದ್ಯಂತ ಇರುವ ಬಿಸಿಯೂಟ ಕಾರ್ಮಿಕರ ನೇಮಕಾತಿಗೆ ಸಂಬಂಧಿಸಿದಂತೆ ಸೂಕ್ತ ಸೇವಾ ನಿಯಮಗಳನ್ನು ಜಾರಿಗೊಳಿಸಬೇಕು~ ಎಂದು ಒತ್ತಾಯಿಸಿದರು.

`ಗುಣಮಟ್ಟದ ಹಾಗೂ ಸೂಕ್ತ ಪ್ರಮಾಣದ ಆಹಾರ ಧಾನ್ಯಗಳ ಪೂರೈಕೆಗೆ ನಿಗದಿತ ನಿಧಿಯನ್ನು ಮೀಸಲಿಡಬೇಕು. ಮತ್ತು ಎಲ್ಲಾ ಶಾಲೆಗಳಲ್ಲೂ ಬಿಸಿಯೂಟ ತಯಾರಿಕೆಗೆ ಅಗತ್ಯವಿರುವ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು~ ಎಂದು ಆಗ್ರಹಿಸಿದರು.

ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.