ಶನಿವಾರ, ಮೇ 15, 2021
25 °C

1,764 ಪಿಯು ಉಪನ್ಯಾಸಕರ ನೇಮಕಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಒಟ್ಟು 1,764 ಉಪನ್ಯಾಸಕರ ನೇಮಕಕ್ಕೆ ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದೇ 16ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆ ದಿನ. ಶುಲ್ಕ ಪಾವತಿಸಲು ಮೇ 16 ಕೊನೆ ದಿನ.ಪಾವತಿಸಿದ ಶುಲ್ಕ, ಚಲನ್ ವಿವರಗಳನ್ನು ಆನ್‌ಲೈನ್ ಮೂಲಕ ಅಪ್‌ಡೇಟ್ ಮಾಡಲು ಮೇ 17 ಕೊನೆ ದಿನ. ಸ್ವರ್ಧಾತ್ಮಕ ಪರೀಕ್ಷೆಗಳು ಜೂನ್ 9ರಂದು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ವಿ.ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ವೆಬ್‌ಸೈಟ್ ವಿಳಾಸ: www.schooleducation.kar.nic.in(online)

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.