18 ಟಿಎಂಸಿ ನೀರಿಗೆ ಮತ್ತೆ ಕ್ಯಾತೆ

7

18 ಟಿಎಂಸಿ ನೀರಿಗೆ ಮತ್ತೆ ಕ್ಯಾತೆ

Published:
Updated:

ನವದೆಹಲಿ: ಕಾವೇರಿ ನದಿಯಿಂದ ತಮಿಳುನಾಡಿಗೆ  18 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕೆಂದು ಕೋರಿ ತಮಿಳುನಾಡು ಗುರುವಾರ ಸುಪ್ರೀಂ ಕೋರ್ಟ್‌ಗೆ ಪೂರಕ ಪ್ರಮಾಣ ಪತ್ರ ಸಲ್ಲಿಸಿದೆ.


ತಮಿಳುನಾಡಿನಲ್ಲಿ ನೀರಿನ ಕೊರತೆ ಆಗಿರುವುದರಿಂದ ಬೆಳೆಗಳು ಒಣಗುತ್ತಿದ್ದು, ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆಂದು ತಮಿಳುನಾಡು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಪೂರಕ ಪ್ರಮಾಣ ಪತ್ರದಲ್ಲಿ ಹೇಳಿದ್ದಾರೆ.

 

ಡಿಸೆಂಬರ್ 7ರಂದು ಸೇರಿದ್ದ ಕಾವೇರಿ ಉಸ್ತುವಾರಿ ಸಮಿತಿ 12 ಟಿಎಂಸಿ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸಿದೆ. ಇದರಿಂದ ತಮಿಳುನಾಡಿಗೆ ತೀವ್ರ ಅನ್ಯಾಯವಾಗಿದೆ. ರೈತರ ಹಿತದೃಷ್ಟಿಯಿಂದ ಜನವರಿಯಲ್ಲಿ 18 ಟಿಎಂಸಿ ನೀರು ಬಿಡುಗಡೆಗೆ ಆದೇಶಿಸಬೇಕೆಂದು ಪ್ರಮಾಣ ಪತ್ರದಲ್ಲಿ ಮನವಿ ಮಾಡಿದೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry