ಭಾನುವಾರ, ಮೇ 16, 2021
29 °C

19ಕ್ಕೆ `ಡಿಎಸ್-ಮ್ಯಾಕ್ಸ್ ಕಲಾಶ್ರೀ' ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಡಿಎಸ್-ಮ್ಯಾಕ್ಸ್ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಜೂನ್ 19ರಂದು `ಡಿಎಸ್-ಮ್ಯಾಕ್ಸ್ ಕಲಾಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಎಂದು ಸಂಸ್ಥೆಯ ನಿರ್ದೇಶಕ ಎಸ್.ಪಿ.ದಯಾನಂದ ತಿಳಿಸಿದರು.ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಜೆಡಿಎಸ್ ಅಧ್ಯಕ್ಷ  ಎಚ್.ಡಿ.ದೇವೇಗೌಡ, ಸಾಹಿತಿ ಚಂದ್ರಶೇಖರ ಕಂಬಾರ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹೇಳಿದರು. ಕಳೆದ ವರ್ಷ ರಂಗಭೂಮಿ ಕಲಾವಿದರಿಗೆ ಪ್ರಶಸ್ತಿ ನೀಡಲಾಗಿತ್ತು. ಈ ವರ್ಷ ಚಲನಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ 12 ಹಿರಿಯ ಕಲಾವಿದರಿಗೆ ಪ್ರಶಸ್ತಿ ನೀಡಲಾಗುವುದು ಎಂದರು.ಕಲಾವಿದರಾದ ಲೀಲಾವತಿ, ಜಯಂತಿ, ಗಿರಿಜಾ ಲೋಕೇಶ್, ಪದ್ಮಾವಾಸಂತಿ, ರೇಖಾದಾಸ್, ಉಮೇಶ್, ಹೊನ್ನವಳ್ಳಿ ಕೃಷ್ಣ, ಡಿಂಗ್ರಿ ನಾಗರಾಜ್, ವೈಜನಾಥ್ ಬಿರಾದಾರ್, ಬ್ಯಾಂಕ್ ಜನಾರ್ದನ, ಕೀರ್ತಿರಾಜ್ ಅವರು ಪ್ರಶಸ್ತಿಗೆ ಭಾಜನರಾಗಲಿದ್ದಾರೆ. ಪ್ರಶಸ್ತಿಯು  ರೂ.10 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ತಿಳಿಸಿದರು. ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಅರುಣ್‌ಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.