ಶುಕ್ರವಾರ, ನವೆಂಬರ್ 15, 2019
21 °C

19ಕ್ಕೆ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ

Published:
Updated:

ಬೆಂಗಳೂರು: ರಾಜ್ಯದ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚಿಸಲು `ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ-2013' ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷೆ ಮಾರ್ಗರೇಟ್ ತಿಳಿಸಿದರು.



ಜುಲೈ 19ರಂದು ಬೆಳಿಗ್ಗೆ 10.30ಕ್ಕೆ ಚಾಮರಾಜಪೇಟೆಯ ಬಾಸ್ಕೋಮನೆಯಲ್ಲಿ ಸಮಾವೇಶ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ ಕಾರ್ಯಕ್ರಮ ಉದ್ಘಾಟಿಸುವರು. ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮತ್ತಿತರರು ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)