ಮಂಗಳವಾರ, ಮೇ 11, 2021
26 °C

19ರಂದು ಕುಲಪತಿಗಳ ಸಮಾವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ವಿಶ್ವವಿದ್ಯಾಲಯಗಳ ಕುಲಪತಿಗಳ ರಾಜ್ಯ ಮಟ್ಟದ ಸಮಾವೇಶವು ಇದೇ 19ರಂದು ದಾವಣಗೆರೆ ವಿ.ವಿ.ಯಲ್ಲಿ ನಡೆಯಲಿದೆ.ಇದರಲ್ಲಿ ಖಾಸಗಿ, `ಡೀಮ್ಡ' ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿದಂತೆ ರಾಜ್ಯದ 17 ವಿಶ್ವವಿದ್ಯಾಲಯಗಳ ಕುಲಪತಿಗಳು ಪಾಲ್ಗೊಳ್ಳುವರು.ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದೆ. ವಿ.ವಿ.ಗಳು ಎದುರಿಸುತ್ತಿರುವ ಸಮಸ್ಯೆ, ಬಿಕ್ಕಟ್ಟು ಹಾಗೂ ಮುನ್ನೋಟದ ಬಗ್ಗೆ ಸಮಾವೇಶದಲ್ಲಿ ಚರ್ಚೆ ಆಗಲಿದೆ. ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆ ವಹಿಸುವರು ಎಂದು ದಾವಣಗೆರೆ ವಿ.ವಿ ಕುಲಸಚಿವ ಪ್ರೊ.ಡಿ.ಎಸ್.ಪ್ರಕಾಶ್ ಶನಿವಾರ ಇಲ್ಲಿ ತಿಳಿಸಿದರು.ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಹಾಗೂ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಜಂಟಿ ಕಾರ್ಯದರ್ಶಿ ಡಾ.ದೇವ್ ಸ್ವರೂಪ್ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.