2ಜಿ: ಅರ್ಜಿ ವಜಾ
ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣ ಸಂಬಂಧ ತಮ್ಮ ಕಂಪೆನಿ ಮತ್ತು ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯದ ಅಧಿಕಾರ ಪ್ರಶ್ನಿಸಿ ಎಸ್ಸಾರ್ ಟೆಲಿಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಲೂಪ್ ಟೆಲಿಕಾಂ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾ ಮಾಡಿದೆ.
ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ 2012ರ ಮೇ ತಿಂಗಳಿನಲ್ಲಿ ತೀರ್ಪು ಕಾಯ್ದಿರಿಸಿತ್ತು. ಸೂಕ್ತ ಕಾರಣ ಇರದ ಹಿನ್ನೆಲೆಯಲ್ಲಿ ಅರ್ಜಿವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಜಿ.ಎಸ್.ಸಿಂಘ್ವಿ, ಎಸ್.ಜೆ.ಮುಖ್ಯೋಪಾಧ್ಯಾಯ ಅವರಿದ್ದ ಪೀಠ ಹೇಳಿದೆ.
ಹಗರಣ ಸಂಬಂಧ ಇತರ ಕಂಪೆನಿಗಳಂತೆ ತಮ್ಮ ಕಂಪೆನಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಹಾಗಾಗಿ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯದ ಬದಲಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲೆ ನಡೆಸಬೇಕೆಂದು ಕೋರಿ ಎಸ್ಸಾರ್ ಮತ್ತು ಲೂಪ್ ಟೆಲಿಕಾಂ ಕಂಪೆನಿಗಳು ಅರ್ಜಿ ಸಲ್ಲಿಸಿದ್ದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.