ಮಂಗಳವಾರ, ಏಪ್ರಿಲ್ 20, 2021
25 °C

2ಜಿ ಹಗರಣದ ವಿಚಾರಣೆಗೆ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಎಲ್ಲ ಅರ್ಜಿಗಳ ವಿಚಾರಣೆಗೂ ಸುಪ್ರೀಂಕೋರ್ಟ್ ತಡೆ ನೀಡಿದೆ.ಸಿಬಿಐ ಸಲ್ಲಿಸಿರುವ ಮನವಿ ಮೇರೆಗೆ ನ್ಯಾಯಮೂರ್ತಿ ಜಿ. ಎಸ್. ಸಿಂಘ್ವಿ ಹಾಗೂ ಕೆ. ಎಸ್. ರಾಧಾಕೃಷ್ಣನ್ ಅವರನ್ನೊಳಗೊಂಡ ನ್ಯಾಯಪೀಠ ಈ ತಡೆಯಾಜ್ಞೆ ಹೊರಡಿಸಿದೆ.2ಜಿ ಹಗರಣಕ್ಕೆ ಸಂಬಂಧಿಸಿದಂತೆ 2011ರ ಏಪ್ರಿಲ್ 11ರಂದು ಹೊರಡಿಸಿದ್ದ ಆದೇಶದಲ್ಲಿ ಸುಪ್ರೀಂಕೋರ್ಟ್, ತನ್ನ ಹೊರತಾಗಿ ಬೇರೆ ನ್ಯಾಯಾಲಯಗಳು ಈ ಪ್ರಕರಣದ ವಿಚಾರಣೆ ನಡೆಸುವಂತಿಲ್ಲ ಎಂದು ಹೇಳಿತ್ತು. ಸಿಬಿಐ ಸಲ್ಲಿಸಿದ ಅರ್ಜಿಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಗಿದೆ.2ಜಿ ಹಗರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದ ನಂತರವೂ ದೆಹಲಿ ಹೈಕೋರ್ಟ್ ಮುಂದೆ 20 ಅರ್ಜಿಗಳು ಇವೆ ಎಂದು ಸಿಬಿಐ, ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿತು.ಈ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಕೆಳ ನ್ಯಾಯಾಲಯಗಳು ನಡೆಸಬಾರದು ಎಂಬ ಸೂಚನೆ ಇ್ದ್ದದರೂ ಹೈಕೋರ್ಟ್ ಈ ರೀತಿ ನಡೆದುಕೊಂಡಿದ್ದು ಅಚ್ಚರಿಯ ವಿಷಯ ಎಂದು ನ್ಯಾಯಮೂರ್ತಿಗಳು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.