ಮಂಗಳವಾರ, ಮೇ 17, 2022
26 °C

2ಜಿ ಹಗರಣ: ಅನಿಲ್ ಅಂಬಾನಿಗೆ ಸಿಬಿಐ ಕ್ಲೀನ್ ಚಿಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎ ಡಿಎಜಿ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದ ಸಿಬಿಐ ಇದೀಗ ಅವರನ್ನು ಆರೋಪ ಮುಕ್ತರನ್ನಾಗಿ ಮಾಡಿದೆ.

 

2ಜಿ ತರಂಗಾಂತರ ಪರವಾನಗಿ ಪಡೆದ ಸ್ವಾನ್ ಟೆಲಿಕಾಂಗೆ ಸೇರಿದ ಹಣವನ್ನು ವರ್ಗಾವಣೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮತ್ತು ವಿವಿಧ ಕಂಪೆನಿಗಳನ್ನು ರೂಪಿಸಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಸಲ್ಲಿಸಲಾದ ತನ್ನ ವಸ್ತುಸ್ಥಿತಿ ವರದಿಯಲ್ಲಿ ಅನಿಲ್ ಅಂಬಾನಿ ಅವರನ್ನು ದೋಷಿಯಾಗಿಸುವಂತಹ ಯಾವುದೇ ಸಾಕ್ಷ್ಯಾಧಾರಗಳು ತನಿಖೆಯಲ್ಲಿ ಲಭಿಸಿಲ್ಲ ಎಂದು ಹೇಳಿದೆ.ಸೆಪ್ಟೆಂಬರ್ 29ರಂದು ಸುಪ್ರೀಂಕೋರ್ಟಿಗೆ ಈ ವರದಿಯನ್ನು ಸಲ್ಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.