2ನೇ ವಾರ್ಡ್ ಉಪ ಚುನಾವಣೆ: ಪ್ರಚಾರ ಅಂತ್ಯ

7

2ನೇ ವಾರ್ಡ್ ಉಪ ಚುನಾವಣೆ: ಪ್ರಚಾರ ಅಂತ್ಯ

Published:
Updated:

ರಾಮನಗರ: ನಗರಸಭೆ ಎರಡನೇ ವಾರ್ಡ್‌ನ ಉಪ ಚುನಾವಣೆಯ ಪ್ರಚಾರ ರಂಗೇರಿದ್ದು, ಬಹಿರಂಗ ಪ್ರಚಾರದ ಕೊನೆಯ ದಿನವಾದ ಶುಕ್ರವಾರ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಬಿರು ಬಿಸಿಲನ್ನೂ ಲೆಕ್ಕಿಸದೆ ಪ್ರಚಾರ ಕೈಗೊಂಡರು.ಜೆಡಿಎಸ್‌ನಿಂದ ರೈಡ್ ನಾಗರಾಜ್, ಕಾಂಗ್ರೆಸ್‌ನಿಂದ ವೆಂಕಟಾಚಲಯ್ಯ, ಬಿಜೆಪಿಯಿಂದ ಎಲ್.ಚಂದ್ರು ಕಣದಲ್ಲಿದ್ದಾರೆ. ಮೂರು ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರಿಗೆ ಈ ಚುನಾವಣೆಯಲ್ಲಿ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾಗಾಗಿ ಮೂರು ಪಕ್ಷಗಳ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ನಾಯಕರು ಪ್ರಚಾರ ಕಣಕ್ಕಿಳಿದು ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದರು.ಜೆಡಿಎಸ್ ಅಭ್ಯರ್ಥಿ ಪರ ಶಾಸಕ ಕೆ.ರಾಜು, ಜಿ.ಪಂ ಸದಸ್ಯ ಚಂದ್ರು, ನಗರಸಭೆ ಅಧ್ಯಕ್ಷ ಸಾಬಾನ್ ಸಾಬ್, ಉಪಾಧ್ಯಕ್ಷ ಬಿ. ಉಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದರಾಜ್ ಮೊದಲಾದ ಮುಖಂಡರು ಅಭ್ಯರ್ಥಿ ಪರ ಮತಯಾಚಿಸಿದರು.ಬಿಜೆಪಿ ಅಭ್ಯರ್ಥಿ ಪರ ರಾಮನಗರ-ಚನ್ನಪಟ್ಟಣ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶೇಷಾದ್ರಿ, ಕೆಎಂಎಫ್ ನಿರ್ದೇಶಕ ಪಿ.ನಾಗರಾಜು, ಬಿಜೆಪಿ ಮುಖಂಡ ಗಿರಿಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರಚಾರ ಕೈಗೊಂಡರು.ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕೆಪಿಸಿಸಿ ಸದಸ್ಯ ಮಂಜುನಾಥ್, ಮುಖಂಡ ಮರಿದೇವರು, ಬ್ಲಾಕ್ ಅಧ್ಯಕ್ಷ ಸಿ.ಎನ್.ಆರ್.ವೆಂಕಟೇಶ್, ಕಾಂತರಾಜ್ ಪಟೇಲ್ ಪ್ರಚಾರ ನಡೆಸಿದರು. ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯವಾಗಿದ್ದು, ಸಂಜೆ ನಂತರ ಅಭ್ಯರ್ಥಿಗಳು ಮತ್ತು ಕಾರ್ಯಕರ್ತರು ಮತದಾರರ ಮನೆ ಮನೆಗೆ ಹೋಗಿ ಮತಯಾಚನೆ ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry