20ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜೋಶಿ

7
ಲೋಕಸಭಾ ಚುನಾವಣೆ

20ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಜೋಶಿ

Published:
Updated:

ಹಾವೇರಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಇದೇ 20 ರಂದು ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್‌ ಜೋಶಿ ಮಂಗಳವಾರ ಇಲ್ಲಿ ಹೇಳಿದರು.ಜಿಲ್ಲೆಯ ಶಿಗ್ಗಾವಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳನ್ನು ವೀಕ್ಷಿಸಿದ ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಕೆಜೆಪಿ ವಿಲೀನಗೊಂಡ ಪರಿಣಾಮ ಯಾರಿಗೆ ಎಲ್ಲಿ ಟಿಕೆಟ್‌ ನೀಡಬೇಕು ಎನ್ನುವ ಕುರಿತು ಚರ್ಚೆ ನಡೆಯುತ್ತಿದೆ. ಚರ್ಚೆ ಮುಗಿದ ನಂತರ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ತಿಳಿಸಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಇನ್ನೊಂದು ರಾಜ್ಯದ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ನರಭಕ್ಷಕ ಎಂದು ಕರೆದಿರುವುದು ಸರಿಯಲ್ಲ. ಈ ರೀತಿಯ ಹೇಳಿಕೆ ಅವರ ಸ್ಥಾನಕ್ಕೆ ಶೋಭೆ ತರುವಂತಹದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯನ್ನು ಕೂಡಲೇ ಹಿಕೆಪಡೆದು ರಾಜ್ಯದ ಜನರಲ್ಲಿ  ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.ಸಂಸದ ಶಿವಕುಮಾರ ಉದಾಸಿ ಅವರ ಆಮಾನತು ಆದೇಶವನ್ನು ಹಿಂತೆಗೆದುಕೊಳ್ಳುವಂತೆ ಸದ್ಯದಲ್ಲಿಯೇ ಪಕ್ಷದ  ವರಿಷ್ಠರಲ್ಲಿ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry