ಶುಕ್ರವಾರ, ನವೆಂಬರ್ 15, 2019
20 °C

200 ಕೋಟಿ ರೂ ಮೌಲ್ಯದ ಚಿನ್ನ, ವಜ್ರ ವಶ

Published:
Updated:

ಮುಂಬೈ (ಪಿಟಿಐ): ರಾಷ್ಟ್ರೀಯ ತನಿಖಾ ದಳ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯಲ್ಲಿ 25 ಲಕ್ಷ ರೂಪಾಯಿ ನಗದು ಹಣ ಸೇರಿದಂತೆ ಸುಮಾರು 200 ಕೋಟಿ ರೂ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ಸೋಮವಾರ ತಡ ರಾತ್ರಿ ವಶಪಡಿಸಿಕೊಂಡಿದ್ದಾರೆ.ನಾಲ್ಕು ದೊಡ್ಡ ಟೆಂಪೋಗಳಲ್ಲಿ ಹಣ, ಚಿನ್ನ ಮತ್ತು ವಜ್ರದ ಆಭರಣಗಳನ್ನು 150 ಬ್ಯಾಗ್‌ಗಳಲ್ಲಿ ಬೇರೆಡೆಗೆ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಸಂಬಂಧ 40 ಜನರನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)