2014ರಲ್ಲಿ ಏಕರೂಪ ಪ್ರವೇಶ ಪರೀಕ್ಷೆ

7

2014ರಲ್ಲಿ ಏಕರೂಪ ಪ್ರವೇಶ ಪರೀಕ್ಷೆ

Published:
Updated:

ನವದೆಹಲಿ (ಪಿಟಿಐ): ಎಂಜಿನಿಯರಿಂಗ್ ಪ್ರವೇಶಕ್ಕಾಗಿ ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪದ ಪ್ರವೇಶ ಪರೀಕ್ಷೆಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಐಐಟಿ ಮಂಡಳಿ ಶನಿವಾರ ಇಲ್ಲಿ ಸಭೆ ಸೇರಿತ್ತು.  

       

 ಮುಂದಿನ ವರ್ಷದ ಬದಲು 2014ರಲ್ಲಿ ಪರೀಕ್ಷೆ ನಡೆಸುವುದನ್ನು ಮಂಡಳಿ ಸಮರ್ಥಿಸಿಕೊಂಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು, ವಿದ್ಯಾರ್ಥಿಯ ಬೋರ್ಡ್ ಪರೀಕ್ಷೆಯ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ಮೆರಿಟ್ ಪಟ್ಟಿ ತಯಾರಿಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಿತು.ಮೇ 28ರಂದು ನಡೆಯಲಿರುವ ಐಐಟಿ ಮತ್ತು ಎನ್‌ಐಟಿಗಳ ಜಂಟಿ ಮಂಡಳಿಗಳ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಗಳು ತಿಳಿಸಿವೆ. ಏಕರೂಪದ ಪ್ರವೇಶ ಪರೀಕ್ಷೆ ನಡೆಸುವುದನ್ನು ಗುವಾಹಟಿ ಐಐಟಿ ಮಾತ್ರ ಬೆಂಬಲಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry