ಪಣಜಿ (ಪಿಟಿಐ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ಉಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಭಾನುವಾರ ಆಯ್ಕೆಮಾಡಲಾಗಿದೆ.

ಗೋವಾದ ಪಣಜಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಈ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಯಿತು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ತಿಳಿಸಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಪಕ್ಷವನ್ನು ಮುನ್ನೆಡಸಲಿದ್ದಾರೆ. ಮೋದಿ ಅವರು ಪಕ್ಷಕ್ಕೆ ದೊಡ್ಡಮಟ್ಟದ ಗೆಲುವನ್ನು ತಂದುಕೊಡಲಿದ್ದಾರೆ ಎಂಬ ವಿಶ್ವಾಸವನ್ನು ರಾಜನಾಥ್ ಸಿಂಗ್ ವ್ಯಕ್ತಪಡಿಸಿದ್ದಾರೆ.

ಕಾರ್ಯಕಾರಣಿ ಸಭೆಯಲ್ಲಿ ಮೋದಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಹಲವು ನಾಯಕರುಗಳ ಗೈರು ಹಾಜರಿಯಲ್ಲೇ ಮೋದಿ ಅವರನ್ನು ಆಯ್ಕೆಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.