ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2014ರಲ್ಲಿ ಏಕರೂಪ ಪ್ರವೇಶ ಪರೀಕ್ಷೆ

Last Updated 12 ಮೇ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಎಂಜಿನಿಯರಿಂಗ್ ಪ್ರವೇಶಕ್ಕಾಗಿ ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಏಕರೂಪದ ಪ್ರವೇಶ ಪರೀಕ್ಷೆಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಐಐಟಿ ಮಂಡಳಿ ಶನಿವಾರ ಇಲ್ಲಿ ಸಭೆ ಸೇರಿತ್ತು.  
       
 ಮುಂದಿನ ವರ್ಷದ ಬದಲು 2014ರಲ್ಲಿ ಪರೀಕ್ಷೆ ನಡೆಸುವುದನ್ನು ಮಂಡಳಿ ಸಮರ್ಥಿಸಿಕೊಂಡಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು, ವಿದ್ಯಾರ್ಥಿಯ ಬೋರ್ಡ್ ಪರೀಕ್ಷೆಯ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳದೇ ಮೆರಿಟ್ ಪಟ್ಟಿ ತಯಾರಿಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಸಿತು.

ಮೇ 28ರಂದು ನಡೆಯಲಿರುವ ಐಐಟಿ ಮತ್ತು ಎನ್‌ಐಟಿಗಳ ಜಂಟಿ ಮಂಡಳಿಗಳ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಮೂಲಗಳು ತಿಳಿಸಿವೆ. ಏಕರೂಪದ ಪ್ರವೇಶ ಪರೀಕ್ಷೆ ನಡೆಸುವುದನ್ನು ಗುವಾಹಟಿ ಐಐಟಿ ಮಾತ್ರ ಬೆಂಬಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT