7

ಮುಕ್ತ ವಿ.ವಿ. ಉಳಿಸಲು ಎಬಿವಿಪಿ ಪ್ರತಿಭಟನೆ

Published:
Updated:
ಮುಕ್ತ ವಿ.ವಿ. ಉಳಿಸಲು ಎಬಿವಿಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು (ಕೆಎಸ್‌ಒಯು) ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿ ಎಬಿವಿಪಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಸದಸ್ಯರು ವಿಧಾನಸೌಧ ಮುತ್ತಿಗೆಗೆ ಮೆರವಣಿಗೆಯಲ್ಲಿ ಹೊರಟ ವೇಳೆ ಮಹಾರಾಣಿ ಕಾಲೇಜು ಜಂಕ್ಷನ್‌ ಬಳಿ ಪೊಲೀಸರು ಅವರನ್ನು ತಡೆದರು.ವಿಧಾನಸೌಧದ ಕಡೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸುಮಾರು 70 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry