7

ಪೊಲೀಸರಿಂದ ಕುರ್ ಆನ್ ಎಸೆದು ಅವಮಾನ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ

Published:
Updated:
ಪೊಲೀಸರಿಂದ ಕುರ್ ಆನ್ ಎಸೆದು ಅವಮಾನ: ಮುಸ್ಲಿಂ ಸಂಘಟನೆಗಳ ಪ್ರತಿಭಟನೆ

ಮಂಗಳೂರು: ಬಂಟ್ವಾಳ ತಾಲ್ಲೂಕಿನ ಸಜೀಪ ಮುನ್ನೂರಿನ ಖಲಂದರ್ ಎಂಬಾತನ ಮನೆಯಲ್ಲಿ ಶೋಧ ಕಾರ್ಯದ ವೇಳೆ ಪೊಲೀಸರು ಇಸ್ಲಾಂ ಧರ್ಮದ ಪವಿತ್ರ ಗ್ರಂಥ ಕುರ್ ಆನ್ ಎಸೆದು ಅವಮಾನ ಮಾಡಿದ್ದಾರೆ ಎಂದು ಮುಸ್ಲಿಂ ಸಂಘಟನೆಗಳು ಆರೋಪಿಸಿವೆ.

ಆ ಪೊಲೀಸರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟದಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಬೃಹತ್  ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಸಂಚಾಲಕ ಕೆ.ಅಶ್ರಫ್ ಪ್ರಾಸ್ತಾವಿಕ ಭಾಷಣ ಮಾಡಿ 'ಕುರ್ ಆನ್ ಅವಮಾನಿಸಿದ ಪೊಲೀಸರಿಗೆ ಶಿಕ್ಷೆಯಾಗುವವರೆಗೂ ಹೋರಾಟ ಮುಂದುವರಿಸುತ್ತೇವೆ' ಎಂದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry