21ನೇ ಸ್ವರ್ಣ ಪದಕಕ್ಕೆ ಮುತ್ತಿಟ್ಟ ಫೆಲ್ಪ್ಸ್

ರಿಯೊ ಡಿ ಜನೈರೊ (ಎಎಫ್ಪಿ): ರಿಯೊ ಒಲಿಂಪಿಕ್ಸ್ನಲ್ಲಿ ಅಮೆರಿಕದ ಈಜುಪಟು ಮೈಕಲ್ ಫೆಲ್ಪ್ಸ್ ಅವರು 21ನೇ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
4X200 ಮೀ. ಫ್ರೀಸ್ಟೈಲ್ ರಿಲೇ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆಯುವ ಮೂಲಕ ಫೆಲ್ಪ್ಸ್ ಚಿನ್ನದ ಬೇಟೆಯಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಫೆಲ್ಪ್ಸ್ ಒಲಿಂಪಿಕ್ ಕೂಟಗಳಲ್ಲಿ ಒಟ್ಟಾರೆಯಾಗಿ 21 ಚಿನ್ನದ ಪದಕಗಳನ್ನು ಗೆದ್ದ ಸಾಧನೆ ಮಾಡಿದ್ದಾರೆ.
ಫೆಲ್ಪ್ಸ್ ಅಥೆನ್ಸ್ನಲ್ಲಿ (2004) ಆರು, ಬೀಜಿಂಗ್ನಲ್ಲಿ (2008) ಎಂಟು ಮತ್ತು ಲಂಡನ್ನಲ್ಲಿ (2012) ನಾಲ್ಕು ಚಿನ್ನದ ಪದಕ ಜಯಿಸಿದ್ದರು. ರಿಯೊ ಒಲಿಂಪಿಕ್ಸ್ನಲ್ಲಿ ಅವರು ಮೂರು ಚಿನ್ನದ ಪದಕಗಳನ್ನು ಕೊರಳಿಗೇರಿಸಿಕೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.