ಮಂಗಳವಾರ, ಜೂನ್ 15, 2021
27 °C

21 ಶಾಲೆಗಳಿಗೆ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಹಸಿರು ಪರಿಸರ ಕಾಪಾ­ಡುವಲ್ಲಿ ಉನ್ನತ ಸಾಧನೆ ಮಾಡಿರುವ ಜಿಲ್ಲೆಯ 21 ಶಾಲೆಗಳಿಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಮಾಡ­ಲಾಯಿತು.ಪ್ರಥಮ ಸ್ಥಾನ ಗಳಿಸಿದ ಶಾಲೆಗೆ ಪರಿಸರ ಮಿತ್ರ ಪ್ರಶಸ್ತಿ ಜೊತೆಗೆ ₨ 20 ಸಾವಿರ ನಗದು ಬಹುಮಾನ ನೀಡ­ಲಾಯಿತು. ದ್ವಿತೀಯ ಸ್ಥಾನ ಗಳಿಸಿದ ಶಾಲೆಗೆ ಹಸಿರು ಶಾಲೆ ಪ್ರಶಸ್ತಿ ಜೊತೆಗೆ ₨ 2 ಸಾವಿರ  ನಗದು ಬಹುಮಾನ ನೀಡಲಾಯಿತು. ತೃತೀಯ ಸ್ಥಾನ ಗಳಿಸಿದ ಶಾಲೆಗೆ ಕಿತ್ತಳೆ ಶಾಲೆ ಪ್ರಶಸ್ತಿ ಜೊತೆಗೆ ₨ 1 ಸಾವಿರ ನಗದು ಬಹುಮಾನ ನೀಡಲಾಯಿತು. ಚತುರ್ಥ ಸ್ಥಾನ ಗಳಿಸಿದ ಶಾಲೆಗೆ ಹಳದಿ ಶಾಲೆ ಪ್ರಮಾಣ ಪತ್ರ ನೀಡಲಾಯಿತು. ಎಲ್ಲ ಶಾಲೆಗಳಿಗೂ ಪ್ರಮಾಣಪತ್ರ ಮತ್ತು ಪಾರಿತೋಷಕ ಪ್ರದಾನ ಮಾಡಲಾಯಿತು.ಪರಿಸರ ಮಿತ್ರ ಶಾಲೆ: ಗೌರಿಬಿದನೂರು ತಾಲ್ಲೂಕಿನ ನಕ್ಕಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಪ್ರಥಮ ಸ್ಥಾನ ಗಳಿಸಿ ಪರಿಸರ ಮಿತ್ರ ಪ್ರಶಸ್ತಿ ಪಡೆಯಿತು.ಹಸಿರು ಶಾಲೆ: ದ್ವಿತೀಯ ಸ್ಥಾನ ಗಳಿಸಿದ ಶಿಡ್ಲಘಟ್ಟ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಚಿಕ್ಕಬಳ್ಳಾಪುರದ ಆವಲಗುರ್ಕಿ ಸರ್ಕಾರಿ ಪ್ರೌಢಶಾಲೆ, ಚಿಂತಾಮಣಿಯ ಹೊಸಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಾಗೇಪಲ್ಲಿಯ ಮೂಗಿಚಿನ್ನೇಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೌರಿಬಿದನೂರಿನ ರಾಮಚಂದ್ರಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಬಳ್ಳಾಪುರದ ನಲ್ಲಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ರೆಡ್ಡಿಗೊಲ್ಲವಾರಹಳ್ಳಿ ಸರ್ಕಾರಿ ಪ್ರೌಢಶಾಲೆ, ಚಿಂತಾಮಣಿಯ ಕೊಡದವಾಡಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶಿಡ್ಲಘಟ್ಟದ ಅಮ್ಮಗಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಚೌಡಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.ಕಿತ್ತಳೆ ಶಾಲೆ: ಗುಡಿಬಂಡೆಯ ಇಡ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಂತಾಮಣಿಯ ನಲ್ಲಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಮಾರಪ್ಪಳ್ಳಿ ಸರ್ಕಾರಿ ಪ್ರೌಢಶಾಲೆ, ಕಂದನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಿಕ್ಕಬಳ್ಳಾಪುರ ಪಂಚಗಿರಿ ಬೋಧನಾ ಪ್ರೌಢಶಾಲೆ, ಪಾತೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತುಮಕಲಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೌರಿಬಿದನೂರಿನ ಗುಂಡ್ಲುಕೊತ್ತೂರು ಶಾರದಾದೇವಿ ವಿದ್ಯಾಲಯ, ಬಾಗೇಪಲ್ಲಿಯ ಷೇರ್‌ಖಾನ್‌ ಕೋಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಶಿಡ್ಲಘಟ್ಟದ ನೀಲವರಾತಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.