ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21ರಂದು ಗುರುವಂದನೆ, ಬಸವ ಜಯಂತಿ

Last Updated 15 ಜೂನ್ 2011, 19:30 IST
ಅಕ್ಷರ ಗಾತ್ರ

ಕನಕಪುರ: ಜಗಜ್ಯೋತಿ ಬಸವೇಶ್ವರ ಜಯಂತಿ ಮತು ಸಿದ್ಧಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿ ಅವರ  ಗುರುವಂದನೆ ಹಾಗೂ ತಾಲ್ಲೂಕು ವೀರಶೈವ ಕ್ಷೇಮಾಭಿವೃದ್ದಿ ಸಂಘದ ಉದ್ಘಾಟನಾ ಸಮಾರಂಭವು 21 ರ ಬೆಳಗ್ಗೆ 11 ಗಂಟೆಗೆ ಪಟ್ಟಣದ ಪುರಸಭಾ ಮೈದಾನದಲ್ಲಿ ನಡೆಯಲಿದೆ ಎಂದು ಮರಳೆ ಮಠದ ಮುಮ್ಮಡಿ ಶಿವರುದ್ರಮಹಾಸ್ವಾಮಿ ಮತ್ತು ಮುಮ್ಮಡಿ ಮಹಾಲಿಂಗ ಸ್ವಾಮಿ ತಿಳಿಸಿದರು.

 ಪಟ್ಟಣದ ವೀರಶೈವ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜಗಜ್ಯೋತಿ ಬಸವೇಶ್ವರರು ಎಲ್ಲಾ ಜಾತಿ ಧರ್ಮಗಳನ್ನು ಒಂದುಗೂಡಿಸಲು ಮುಂದಾದ ಮಹಾನ್ ವ್ಯಕ್ತಿ. ಅಂಥವರ ಜಯಂತಿಗಳನ್ನು ಆಚರಿಸಿ  ತತ್ವ, ಸಿದ್ದಾಂತ, ಆದರ್ಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ~ ಎಂದು ಹೇಳಿದರು. 

 ಶಿವಕುಮಾರ ಸ್ವಾಮೀಜಿ ಲಕ್ಷಾಂತರ ಬಡ ಮಕ್ಕಳಿಗೆ ಉಚಿತ ದಾಸೋಹ ಮತ್ತು ಶಿಕ್ಷಣ ನೀಡಿದ್ದಾರೆ. ತಮ್ಮ ಇಳಿ ವಯಸ್ಸಿ ನಲ್ಲೂ ಧರ್ಮವನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂಥ ಮಹಾನ್ ತ್ಯಾಗಮಯಿಗೆ ಗುರುವಂದನೆ ಸಲ್ಲಿಸಲಾಗುವುದು ಎಂದರು.

 ಈ ಕಾರ್ಯಕ್ರಮಕ್ಕೆ  ವೀರಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘ ಶರಣರು ದಿವ್ಯಸಾನಿಧ್ಯವಹಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆವಹಿಸಲಿದ್ದು ಸಚಿವ ವಿ. ಸೋಮಣ್ಣ ನುಡಿ ನಮನ ಸಲ್ಲಿಸಲಿದ್ದಾರೆ.   ಸಚಿವರಾದ ಸಿ.ಎಂ.ಉದಾಸಿ, ಬಿ.ಎನ್.ಬಚ್ಚೇಗೌಡ, ಶೋಭ ಕರಂದ್ಲಾಜೆ, ಬಸವರಾಜು ಬೊಮ್ಮಾಯಿ,

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯರಾದ ಎಂ.ವಿ.ರಾಜಶೇಖರನ್, ಈ.ಕೃಷ್ಣಪ್ಪ, ಶಾಸಕರಾದ ಸಿ.ಪಿ.ಯೋಗೇಶ್ವರ್, ಕೆ.ರಾಜು, ರಾಮಚಂದ್ರ, ಮಾಜಿ ಎಂ.ಎಲ್.ಸಿ. ಎಸ್.ರವಿ, ಭಾಗವಹಿಸಲ್ಲಿದ್ದಾರೆ. ದೇಗುಲಮಠದ ಮುಮ್ಮಡಿ ನಿರ್ವಾಣಸ್ವಾಮಿ, ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಕಲ್ಪನಾ ಮಲ್ಲಿಕಾರ್ಜುನೇಗೌಡ, ಶಿವಗಿರಿ ಕ್ಷೇತ್ರದ ಅನ್ನದಾನೇಶ್ವರಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಕನ್ಯರಂಗಸ್ವಾಮಿ, ಪುರಸಭೆ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT