ಶುಕ್ರವಾರ, ಜೂನ್ 25, 2021
30 °C

22ರಂದು ಶಿಕ್ಷಕರಿಗೆ ಸಂದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ:  ನಗರದ ಕಾವೇರಮ್ಮ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾರ್ಚ್ 22ರಂದು ಬೆಳಿಗ್ಗೆ 11ಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ ಜ್ಯೇಷ್ಠತಾ ಪಟ್ಟಿಯ ಶಿಕ್ಷಕರಿಗೆ ಸಂದರ್ಶನ ನಡೆಯಲಿದೆ. ಸಂದರ್ಶನ ದಿನದಂದು ಸಂಬಂಧಪಟ್ಟ ಶಿಕ್ಷಕರು ಲಿಖಿತ ಹಾಜರಾತಿಯನ್ನು ಕ್ಷೇತ್ರ ಶಿಕ್ಷಣ ಉಪ ನಿರ್ದೇಶಕರಿಗೆ ಸಲ್ಲಿಸಬೇಕು. ಬಡ್ತಿ ದಿನಾಂಕ ಮುಂದೆ ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎ. ರಾಜಶೇಖರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದು ಸಭೆ

ಹರಪನಹಳ್ಳಿ: ಸ್ಥಳೀಯ ನಟರಾಜ ಕಲಾಭವನದಲ್ಲಿ ತಾಲ್ಲೂಕು ವಾಲ್ಮೀಕಿ ನಾಯಕ ಸಮುದಾಯದ ಸಭೆಯಲ್ಲಿ ಮಾರ್ಚ್ 19ರಂದು ಸೋಮವಾರ ಬೆಳಿಗ್ಗೆ 11ಕ್ಕೆ ಆಯೋಜಿಸಲಾಗಿದೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಎಚ್.ಟಿ. ಗಿರೀಶಪ್ಪ ವಹಿಸುವರು.  ಸಮಾಜದ ಸಮಸ್ತರು ಸಭೆಗೆ ಹಾಜರಾಗಿ ಸೂಕ್ತ ಸಲಹೆ ನೀಡುವಂತೆ ಸಮಾಜದ ತಾಲ್ಲೂಕು ಘಟಕದ ಕಾರ್ಯದರ್ಶಿ ಎಚ್.ಕೆ. ಹಾಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.