22ರಿಂದ ಮಾರಿಕಾಂಬಾ ಜಾತ್ರೆ

7

22ರಿಂದ ಮಾರಿಕಾಂಬಾ ಜಾತ್ರೆ

Published:
Updated:

ಶಿವಮೊಗ್ಗ: ಮೂರು ವರ್ಷಕ್ಕೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಸಾಗರದ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಈ ಬಾರಿ ಫೆ. 22ರಿಂದ ಮಾರ್ಚ್ 2ರವರೆಗೆ ನಡೆಯಲಿದೆ.ಜಾತ್ರೆಯಲ್ಲಿ ಪ್ರತಿದಿನ ಮಾರಿಕಾಂಬೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ, ಕುಸ್ತಿ, ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಪ್ರತಿ ದಿನ 1ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡುವರು ಎಂದು ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಓಮನ್ ಸಿಂಗ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಉಚಿತ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಂಕ್ರಾಮಿಕ ರೋಗ ಬಾರದಂತೆ ಮುಂಜಾಗ್ರತೆ ವಹಿಸಲಾಗಿದೆ ಎಂದರು. ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಇಲ್ಲ. ಬದಲಾಗಿ ಅಧಿಕಾರಿಗಳ ಮತ್ತು ವೈದ್ಯರ ಸಮ್ಮುಖದಲ್ಲಿ ಸಿರಿಂಜಿನ ಮೂಲಕ ಕೋಣದ ರಕ್ತ ತೆಗೆದು ದೇವಿಗೆ ಅರ್ಪಿಸಲಾಗುತ್ತದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry