ಶುಕ್ರವಾರ, ಏಪ್ರಿಲ್ 23, 2021
22 °C

22ರಿಂದ ಸಂಪದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸ್ಪಂದನ ಸಂಸ್ಥೆ ವತಿಯಿಂದ `ಸಂಪದ~ (ಸಂಸ್ಕೃತಿ-ಪರಂಪರೆ-ದರ್ಪಣ) ಹೆಸರಿನಲ್ಲಿ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವನ್ನು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನ.22ರಿಂದ 25ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಸಭಾ ಸದಸ್ಯೆ ಡಾ.ಬಿ.ಜಯಶ್ರೀ ಹೇಳಿದರು. ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ತಾಂತ್ರಿಕತೆ- ಆಧುನಿಕತೆಗಳನ್ನು ಅಪ್ಪಿಕೊಂಡ ಮನಸ್ಸುಗಳಿಗೆ `ಸಂಪದ~ದ ಮೂಲಕ ನಮ್ಮ ಭಾರತೀಯ ಸಂಸ್ಕೃತಿ-ಪರಂಪರೆಗಳಾದ ಜನಪದ, ಶಾಸ್ತ್ರೀಯ ಹಾಗೂ ಅಪರೂಪದ ಕರಕುಶಲ ಕಲೆಗಳನ್ನು ಪರಿಚಯಿಸಿ, ಮುಂದಿನ ಪೀಳಿಗೆಗೂ ಕೊಂಡೊಯ್ಯುವ ಉದ್ದೇಶ ನಮ್ಮದಾಗಿದೆ ಎಂದರು.  ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದಲ್ಲಿ ದೇಶದ ನಾನಾ ಭಾಗಗಳಿಂದ ನಾಟಕ, ಶಾಸ್ತ್ರೀಯ ಸಂಗೀತ, ಜನಪದ ಕಲಾಪ್ರಕಾರಗಳ ಹೆಸರಾಂತ ಕಲಾವಿದರು ಭಾಗವಹಿಸಲಿದ್ದಾರೆ. ನ.22ರಂದು ಸಂಜೆ 4 ಗಂಟೆಗೆ ಅಂಬಾವಿಲಾಸ ಅರಮನೆ ಮುಂಭಾಗದಿಂದ ಮೆರವಣಿಗೆ ಆರಂಭವಾಗಿ, ದೇವರಾಜ ಅರಸು ರಸ್ತೆ, ಮೆಟ್ರೊಪೋಲ್ ವೃತ್ತದ ಮಾರ್ಗವಾಗಿ ಕಲಾಮಂದಿರ ತಲುಪಲಿದೆ. ಜನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಲಿವೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.