ಸೋಮವಾರ, ಮೇ 23, 2022
20 °C

22 ಬ್ಯಾಂಕುಗಳಿಗೆ ರಿಸರ್ವ್ ಬ್ಯಾಂಕ್ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ):  ಕೆವೈಸಿ/ ಹಣ ವರ್ಗಾವಣೆ ವಿರೋಧಿ ಮಿತಿಗಳ ಉಲ್ಲಂಘನೆಗಾಗಿ 22 ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್  ದಂಡ ವಿಧಿಸಿದೆ.ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ), ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ ಬಿ), ಯೆಸ್ ಬ್ಯಾಂಕ್, ಕೊಟಕ್ ಮಹೀಂದ್ರ, ಕೆನರಾ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ 22 ಬ್ಯಾಂಕುಗಳಿಗೆ ಒಟ್ಟು 49.65 ಕೋಟಿ ರೂಪಾಯಿಗಳ ದಂಡ ಹೇರಿದೆ.ಜೊತೆಗೆ ಸಿಟಿಬ್ಯಾಂಕ್, ಸ್ಟಾಂಚರ್ಟ್, ಆರ್ ಬಿ ಎಸ್, ಬಿಎನ್ ಪಿ ಪರಿಬಸ್, ಟೋಕಿಯೊ ಬಿತ್ಸುಬಿಶಿ, ಬಾರ್ಸಲೀಸ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಪಾಟಿಯಾಲ ಇವುಗಳಿಗೆ ಎಚ್ಚರಿಕೆಯ ನೋಟಿಸ್ ಗಳನ್ನೂ ರಿಸರ್ವ್ ಬ್ಯಾಂಕ್ ಜಾರಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.